Sunday, April 14, 2024

ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

ಬಂಟ್ವಾಳ:  ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಶನಿವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು.

ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಈ ವೇಳೆ ಅವರು ಮಾತುಕತೆ ನಡೆಸಿದರು. ಅಲ್ಲದೆ, ರೈ ಅವರ ಚುನಾವಣಾ ಯಶಸ್ಸಿಗೆ ಶುಭಕೋರಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.

More from the blog

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...