Wednesday, April 17, 2024

ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ…. ಬಂಟ್ವಾಳ ‌ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದಿಂದ ಅಪಾರ ಕಾರ್ಯಕರ್ತರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಪಕ್ಷ ನಿಷ್ಠೆಯಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷವನ್ನು ಕಟ್ಟುವ ಕೆಲಸ ಮಾಡಿದ್ದೇನೆ, ಜೊತೆಗೆ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದೇನೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಹಾಗೂ ಅನೇಕ ಕನಸಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ಅವಕಾಶ ನೀಡಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಅವರು ಬಿಸಿರೋಡನಲ್ಲಿ ನಾಮಪತ್ರ ಸಲ್ಲಿಕೆಯ ಮೊದಲು ಪ್ಲೈ ಓವರ್ ನ ಅಡಿಭಾಗದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಪಕ್ಷದ ಸ್ಥಿತಿ ಉತ್ತಮವಾಗಿಲ್ಲದ ಸಂದರ್ಭದಲ್ಲಿ, ಪ್ರಕ್ಷ್ಯುಬ್ದ ವಾತವಾರಣದಲ್ಲಿಯೂ ಕ್ಷೇತ್ರದ ಜನತೆ ನನಗೆ ಅವಕಾಶ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ನೆನಪಿಸಿಕೊಂಡರು.

ಬಿಸಿರೋಡಿನ ಪಿ.ಎಲ್.ಡಿ. ಬ್ಯಾಂಕ್ ನನಗೆ ಶಕ್ತಿ ನೀಡಿದೆ. ಕಳೆದ ಬಾರಿ ಸೋತದಕ್ಕೆ ಬೇಜಾರಿಲ್ಲ,ಸೋಲಿಸಿದ ರೀತಿಯ ಬಗ್ಗೆ ನೋವಿದೆ. ಬಿಜೆಪಿಯ ಅಪ್ರಚಾರದ ಮೂಲಕ ನನಗೆ ಸೋಲಾಗಿದೆ. ಕಾಂಗ್ರೆಸ್ ಪಕ್ಷ 9 ನೇ ಭಾರಿ ಸ್ಪರ್ಧೆ ಮಾಡಲು ಅವಕಾಶ ನೀಡಿದೆ. ಅದರಲ್ಲಿ 6 ಬಾರಿ ಶಾಸಕನಾಗಿ, 3 ಬಾರಿ ಸಚಿವರಾಗಿ ಕೆಲಸ ಮಾಡಲು ಕ್ಷೇತ್ರದ ಜನತೆ ಅವಕಾಶ ನೀಡಿದ್ದಾರೆ ಎಂದು ಅವರು ತಿಳಿಸಿದರು.

ನನ್ನ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಪಕ್ಷದ ಹಿರಿಮೆಯನ್ನು ಹೆಚ್ಚಿಸುವ ಕೆಲಸ ಮಾಡಿದ್ದೇನೆ. ಜೊತೆಗೆ ಕ್ಷೇತ್ರದ ಮತದಾರರಿಗೆ ಅಗೌರವ ತೋರುವ ಕೆಲಸ ಮಾಡಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರಿಂದ ಆಗಬೇಕಾಗಿದೆ ಎಂದು ಅವರು ತಿಳಿಸಿದರು.

ಪುತ್ತೂರು ಮಾಜಿ ಶಾಸಕಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದೆ ಅನುಭವಿಸಿದ ನೋವನ್ನು ಹೇಳಲು ಸಾಧ್ಯವಿಲ್ಲ, ಕಾರ್ಯಕರ್ತರಿಗೆ ಶಕ್ತಿ ಬರಬೇಕಾದರೆ ಬಂಟ್ವಾಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಅವರು ತಿಳಿಸಿದರು.

ಬಿ.ಕೆ.ಹರಿಪ್ರಸಾದ್ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೇಸ್ ಬಲಪಡಿಸುವ ನಿಟ್ಟಿನಲ್ಲಿ ಬಂಟ್ವಾಳ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ‌ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಶಕುಂತಲಾ ಶೆಟ್ಠಿ, ರಾಕೇಶ್ ಮಲ್ಲಿ, ಅಶ್ವಿನ್ ಕುಮಾರ್ ರೈ, ಎ.ಸಿ.ಭಂಡಾರಿ, ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಮಮತಾ ಗಟ್ಟಿ,ಜಯಂತಿ ಎಸ್.ಪೂಜಾರಿ, ಮಾಯಿಲಪ್ಪ ಸಾಲಿಯಾನ್, ಭಾರತಿ ರಾಜೇಂದ್ರ,ಜಾಸ್ಮಿನ್, ಮತ್ತಿತರರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಯ ಮೊದಲು ಅವರು ನಂದಾವರ ದೇವಸ್ಥಾನ, ಮಿತ್ತಬೈಲು ಮಸೀದಿ, ಮೊಡಂಕಾಪು ಚರ್ಚ್, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಬಿಸಿರೋಡಿಗೆ ಆಗಮಿಸಿದರು.

ಮೆರವಣಿಗೆಯಲ್ಲಿ ಕಾರ್ಯಕರ್ತರ ಜೊತೆ ಆಗಮಿಸಿದ ರಮಾನಾಥ ರೈ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಳಿಕ ಬಿಸಿರೋಡಿನ ಆಡಳಿತ ಸೌಧದ ಕಚೇರಿಗೆ ಹೋಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯ ಉದ್ದಕ್ಕೂ ರಮಾನಾಥ ಅವರ ಧರ್ಮಪತ್ನಿ ಧನಭಾಗ್ಯ ಆರ್.ರೈ ಜೊತೆಗಿದ್ದರು.

More from the blog

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...