Monday, April 8, 2024

ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದ ಎಸ್‌.ಅಂಗಾರ

ಸುಳ್ಯ: ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು.

ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆಯುತ್ತೇನೆ ಎಂದು ತಿಳಿಸಿದರು.

7 ಬಾರಿ ಸ್ಪರ್ಧೆ ಮಾಡಿದಾಗಲೂ ನಾನೆಂದೂ ನನಗೆ ಟಿಕೆಟ್ ಕೊಡಿ ಎಂದು ಕೇಳಕೊಂಡವನಲ್ಲ. ಟಿಕೆಟ್ ಗಾಗಿ ಲಾಬಿ ಮಾಡಿದವನೂ ಅಲ್ಲ. ಇಷ್ಟು ಬಾರಿಯೂ ಪಕ್ಷವೇ ನನಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತ್ತು. ನನ್ನ ಸಾರ್ವಜನಿಕ ಜೀವನದಲ್ಲಿ ನಾನೆಂದೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನೂ ಅಲ್ಲ. ನನ್ನ ಜೀವನ ತೆರೆದ ಪುಸ್ತಕ ಯಾರು ಬೇಕಾದರೂ ಓದಬಹುದಿತ್ತು ಎಂದರು.

ಈ ಬಾರಿಯೂ ನಾನು ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ ಎಂಬ ಹೇಳಿಕೆಯನ್ನು ಕೊಟ್ಟಿದ್ದೆ. ಬದಲಾವಣೆ ಮಾತುಕತೆ ಇಲ್ಲದ ಕಾರಣ ನಾನು ನಿರಾಳನಾಗಿದ್ದೆ. ಏಪ್ರಿಲ್ 11ರ ರಾತ್ರಿ ಟಿ.ವಿ. ನೋಡಿದಾಗಲೇ ನನಗೆ ಅವಕಾಶವಿಲ್ಲ ಎಂಬ ಮಾಹಿತಿ ಸಿಕ್ಕಿತ್ತು. ಇದರಿಂದ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಯಾರಲ್ಲಿ ಏನು ಹೇಳಬೇಕೆಂದೂ ಹೊಳೆಯಲಿಲ್ಲ. ಹೀಗಾಗಿ ಏಪ್ರಿಲ್12 ರಂದು ಬೆಳಗ್ಗೆ ನಾನು ಗೊಂದಲದಿಂದ ನನ್ನ ನಿರ್ಧಾರವನ್ನು ಪ್ರಕಟ ಮಾಡಿದೆ ಎಂದು ಹೇಳಿದರು.

ಅವರು ಒಬ್ಬ ಮನೆ ಕೆಲಸದವನ್ನು ಇಡುವಾಗಲೂ ಗಡುವು ಹಾಕಿ ತಿಳಿಸುವ ವ್ಯವಸ್ಥೆ ಇದೆ. 36 ವರ್ಷ ತೊಡಗಿಸಿಕೊಂಡ ನಾನು ಪರಿಸ್ಥಿತಿಯ ಬಗ್ಗೆ ನನಗೇ ಏನೂ ತೋಚದಂತಾಯಿತು. ಬಳಿಕ ನನ್ನ ಬಗ್ಗೆ ಬೇರೆ ಬೇರೆ ರೀತಿಯಲ್ಲಿ ಚರ್ಚೆ ಆರಂಭವಾಗಿರುವುದು ಗಮನಿಸಿದ್ದೇನೆ. ಇದರಿಂದಾಗಿ ನನ್ನ ಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ತಪ್ಪು ಸಂದೇಶ ಹೋಗುತ್ತಿರುವುದು ಸರಿಯಲ್ಲ. ನಿಜ ಸಂಗತಿ ತಿಳಿಸುವುದು ಅಗತ್ಯ ಅನ್ನಿಸಿದ್ದರಿಂದ ನಾನು ಈ ಹೇಳಿಕೆ ನೀಡುತ್ತಿದ್ದೇನೆ ಎಂದರು.

ರಾಜಕೀಯದಲ್ಲಿ ಇಲ್ಲದಿದ್ದರೂ ಸಮಾಜದ ಮಧ್ಯೆ ನನ್ನ ಕೆಲಸ, ಕರ್ತವ್ಯ ನಿಲ್ಲುವುದಿಲ್ಲ. ಚುನಾಯಿತನಾಗುವ ಮೊದಲೂ ಸಮಾಜದೊಂದಿಗಿದ್ದೆ, ಇನ್ನು ಮುಂದೆಯೂ ಸಮಾಜದ ಜೊತೆಗಿರುತ್ತೇನೆ. ಕ್ಷೇತ್ರದ ಜನ ಸಮಸ್ಯೆ ಹೊತ್ತು ನನ್ನ ಬಳಿ ಬಂದಾಗ ನನ್ನ ಸಹಾಯ ನೀಡಲು ಹಿಂದಿನಂತೆಯೇ ಬದ್ಧನಿದ್ದೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಚಾರ ಸಮಿತಿ ಮುಖ್ಯಸ್ಥ ವೆಂಕಟ್ ದಂಬೆಕೋಡಿ ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...