Saturday, April 6, 2024

ಗಾಂಜಾ ಮಾರಾಟ ಆರೋಪ : ಮೆಡಿಕಲ್ ವಿದ್ಯಾರ್ಥಿ ಸಹಿತ ಮೂವರ ಬಂಧನ

ಮಂಗಳೂರು: ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್, ಸಕಲೇಶಪುರದ ಧ್ರುವ ಶೆಟ್ಟಿ ಮತ್ತು ಕುಳಾಯಿಯ ಶಿವಾನಿ ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ.

ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಶೀತಲ್ ಅಲಗೂರು ರವರಿಗೆ ಬಂದ ಮಾಹಿತಿ ಮೇರೆಗೆ ಆರೋಪಿ ಪ್ರಜ್ವಲ್ ಫಿನ್ಹಾನ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಆತನ ಮಾಹಿತಿ ಮೇರೆಗೆ ಉಳಿದ ಆರೋಪಿಗಳನ್ನು ಸಿಸಿಬಿ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಗಳ ಪೈಕಿ ಪ್ರಜ್ವಲ್ ಎಂಬಾತನು ಮಹಾರಾಷ್ಟ್ರ ರಾಜ್ಯದಿಂದ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಮತ್ತು ಶಿವಾನಿ ಅವರಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾ ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆನ್ನಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಪ್ರಜ್ವಲ್ ವಿರುದ್ಧ ಈ ಹಿಂದೆ ಸೆನ್ ಪೊಲೀಸ್ ಠಾಣೆಯಲ್ಲಿ ಎಂ.ಡಿ.ಎಂ.ಎ ಮತ್ತು ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ರಾಜೇಂದ್ರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಶೀತಲ್ ಅಲಗೂರು, ಪಿಎಸ್‌ಐ ಜ್ಯೋತಿ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಪಾಲ್ಗೊಂಡಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...