Tuesday, April 16, 2024

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾತೃ ಶಕ್ತಿ ಸಮಾವೇಶ

ಬಂಟ್ವಾಳ: ಬಿಜೆಪಿಯು ಕಪ್ಪು ಹಣ ತರುವುದು, ಉದ್ಯೋಗ ಸೃಷ್ಟಿ ಮೊದಲಾದ ಭರವಸೆ ಸೃಷ್ಟಿಸಿ, ಪೆಟ್ರೋಲ್, ಗ್ಯಾಸ್ ಬೆಲೆಯನ್ನು ಮೂರು ಪಟ್ಟು ಹೆಚ್ಚಿಸಿರುವುದೇ ಬಿಜೆಪಿ ಸಾಧನೆಯಾಗಿದೆ. ಅಪರೂಪದ ರಾಜಕಾರಣಿ ರಮಾನಾಥ ರೈ ಅವರು ಮತ್ತೆ ಗೆದ್ದು ಬರುವ ರೀತಿ ಮಹಿಳೆಯರು ಕೆಲಸ ಮಾಡಬೇಕಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.

ಅವರು ಗಾಣದಪಡ್ಪು ನಾರಾಯಣ ಗುರು ಸಭಾಭವನದಲ್ಲಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಮಾತೃ ಶಕ್ತಿ ಸಮಾವೇಶವನ್ನು ಉದ್ಘಾಟಿಸಿದರು.

ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಮಾತನಾಡಿ, ಮೋದಿಯವರು ಅಧಿಕಾರಕ್ಕೆ ಬಂದು ೨ ಸಾವಿರ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದು, ಆದರೆ ಅವರ ಅಽಕಾರದಲ್ಲಿ ೧೪ ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಜನರ ಒಡನಾಟವಿಲ್ಲದ ಬಿಜೆಪಿಯು ಹಸಿವು ಸೇರಿದಂತೆಯಾವುದೇ ಸಮಸ್ಯೆ ಇಲ್ಲ ಎಂದು ಹೇಳುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಬಿ.ರಮಾನಾಥ ರೈ ಮಾತನಾಡಿ, ರಾಜೀವ ಗಾಂದಿ ಅವರ ಕಲ್ಪನೆಯಂತೆ ಅನುದಾನ ಕೇಂದ್ರದಿಂದ ನೇರವಾಗಿ ಜಿಲ್ಲೆಗೆ ತಲುಪಿ ಅಭಿವೃದ್ಧಿ ಸಾಧ್ಯವಾಗಿದ್ದು, ನೇರ ನಗದು ವರ್ಗಾವಣೆಯ ವ್ಯವಸ್ಥೆಯೂ ಯುಪಿಎ ಸರಕಾರದ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಅನುಷ್ಠಾನಕ್ಕೆ ಬಂದಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸೃಷ್ಟಿಸಿ ಮಕ್ಕಳು, ಮಹಿಳೆಯರ ಆರೋಗ್ಯದ ಬದಲಾವಣೆಗೆ ಇಂದಿರಾ ಗಾಂಽ ಕಾರಣರಾಗಿದ್ದರು ಎಂದರು.

ಎಐಸಿಸಿಯ ದ.ಕ.ಜಿಲ್ಲಾ ವೀಕ್ಷಕಿ ಶಿಭಾ ರಾಮಚಂದ್ರನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಮಮತಾ ಗಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ, ಪಾಣೆಮಂಗಳೂರು ಬ್ಲಾಕ್ ಉಸ್ತುವಾರಿ ಅಪ್ಪಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್‌ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಲವಿನಾ ವಿಲ್ಮಾ ಮೊರಾಸ್ ಉಪಸ್ಥಿತರಿದ್ದರು.

ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಸ್ವಾಗತಿಸಿದರು. ಮಾಣಿ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...