Saturday, April 13, 2024

ಸರಕಾರಿ ಬಸ್-ಕಾರು ಭೀಕರ ಅಪಘಾತ : ಆರು ಮಂದಿ ದುರ್ಮರಣ

ಸುಳ್ಯ: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ.ಸಿ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.

ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬಂದ ಶಿಪ್ಟ್ ಕಾರು ಸಂಪಾಜೆ ಪೆಟ್ರೋಲ್ ಪಂಪ್ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಕೆಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು, ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಮೃತಪಟ್ಟಿದ್ದಾರೆ. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು ಎಂದು ಹೇಳಲಾಗಿದೆ, ಒಬ್ಬ ಗಂಡಸು ಮತ್ತು ಮಗು ಗಂಭೀರ ಸ್ಥಿತಿಯಲ್ಲಿ ಸುಳ್ಯ ಕೆ ವಿ ಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಮಂಡ್ಯ ಮೂಲದ ಮಳವಳ್ಳಿಯವರು ಎಂದು ಹೇಳಲಾಗಿದೆ. ಮೃತರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...