Friday, April 5, 2024

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

ಬೆಂಗಳೂರು:  2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ.

2022-23ನೆ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9ರಿಂದ 29ರವರೆಗೆ ನಡೆಸಲಾಗಿತ್ತು. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನವೂ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಫಲಿತಾಂಶವನ್ನು ಈ ಲಿಂಕ್‌ ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ತಿಳಿಸಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸುವುದು ಹೇಗೆ?

  • ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ.
  • ಓಪನ್‌ ಆದ ಪೇಜ್‌ನಲ್ಲಿ 2nd ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತದೆ.
  • ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ.
  • ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
  • ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.
  • ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಿ.

 

 

 

 

More from the blog

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...