Saturday, April 6, 2024

ರಾಮ್ ಸೇನಾ ಕರ್ನಾಟಕ (ರಿ) ಜಿಲ್ಲಾ ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ರಾಮ್ ಸೇನಾ ಕರ್ನಾಟಕ (ರಿ).ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಘಟಕಗಳ ಮಹಿಳೆಯರೂ ಸೇರಿದಂತೆ ಸುಮಾರು 60 ಮಂದಿ ಸದಸ್ಯರು ದಿನಾಂಕ 23-04-2023 ರಂದು ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ದೇವಸ್ಥಾನದ ಆಸುಪಾಸಿನ ಪ್ರದೇಶದಲ್ಲಿ, ರಥಬೀದಿ, ದರ್ಪಣ ತೀರ್ಥ ಹಾಗೂ ಕುಮಾರಧಾರಾ ನದಿಯಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸುವ ಶ್ರಮದಾನ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯಿತಿಯ ಸದಸ್ಯ ಹರೀಶ ಇಂಜಾಡಿಯವರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ,ಶ್ರೀ ಸಂಪುಟ ನರಸಿಂಹ ಸುಬ್ರಹ್ಮಣ್ಯ ಮಠದ ವತಿಯಿಂದ ಸಾಗಾಟ ವಾಹನ, ಗ್ಲವ್ಸ್, ಊಟ ಉಪಾಹಾರದ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇತ್ಯಾದಿಗಳನ್ನು ನೀಡಿ ಸಹಕರಿಸಲಾಯಿತು.

ಹರೀಶ ಇಂಜಾಡಿಯವರು ತಂಡದ ಸದಸ್ಯರಿಗೆ ಸೂಕ್ತ ಸಲಹೆ, ನಿರ್ದೇಶನ ನೀಡಿ ಶುಭ ಹಾರೈಸಿದರು. ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಪುರುಷೋತ್ತಮ ಆಚಾರ್ ರವರು ಕಾರ್ಯಕ್ರಮ ಸಂಘಟಿಸಿದ್ದರು.

More from the blog

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...