Tuesday, April 9, 2024

ತುಂಬೆ ಪದವಿ ಪೂರ್ವ ಕಾಲೇಜು- ವಿಜ್ಞಾನ ವಿಭಾಗ 100% ಫಲಿತಾಂಶ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತುಂಬೆ ಪದವಿ ಪೂರ್ವ ಕಾಲೇಜಿನಿಂದ 121 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 116 ಮಂದಿ ಉತ್ತೀರ್ಣರಾಗಿದ್ದು, ಒಟ್ಟು 96% ಫಲಿತಾಂಶ ಬಂದಿರುತ್ತದೆ.

ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶ, ವಾಣಿಜ್ಯ ವಿಭಾಗದಲ್ಲಿ 96% ಫಲಿತಾಂಶ ಹಾಗೂ ಕಲಾ ವಿಭಾಗದಲ್ಲಿ 89% ಫಲಿತಾಂಶ ದಾಖಲಾಗಿದ್ದು, ವಿಜ್ಞಾನ ವಿಭಾಗದಲ್ಲಿ ದೀಕ್ಷಾ 563 ಅಂಕ, ಕಲಾ ವಿಭಾಗದಲ್ಲಿ ಮಹಮ್ಮದ್ ಇರ್ಫಾನ್ 560 ಅಂಕ ಹಾಗೂ ವಾಣಿಜ್ಯ ವಿಭಾಗದಲ್ಲಿ ಆಯಿಷಾ ಶಿಫಾನ 545 ಅಂಕ ಪಡೆದು, ಕಾಲೇಜಿಗೆ ಪ್ರಥಮ ಸ್ಥಾನಿಗಳಾಗಿದ್ದಾರೆ.

21 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 68 ಮಂದಿ ಪ್ರಥಮ ಶ್ರೇಣಿಯಲ್ಲಿ, 19 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 10 ಮಂದಿ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಗ್ರಾಮೀಣ ಪ್ರದೇಶದಲ್ಲಿರುವ ಈ ಕಾಲೇಜು ಸರಾಸರಿ ಪ್ರತೀ ವರ್ಷ 95% ಕ್ಕಿಂತ ಅಧಿಕ ಫಲಿತಾಂಶವನ್ನು ಸಾಧಿಸುತ್ತಾ ಬಂದಿರುವುದು ಗಮನಾರ್ಹವಾಗಿದೆ.

More from the blog

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...