Saturday, April 6, 2024

ರೈಲು ಅವಘಡ ತಪ್ಪಿಸಿದ ವೃದ್ಧೆಗೆ ಪೊಲೀಸರಿಂದ ಸನ್ಮಾನ

ಮಂಗಳೂರು: ರೈಲು ಹಳಿಗೆ ಮರ ಬಿದ್ದುದ್ದನ್ನು ಗಮನಿಸಿ ತಕ್ಷಣ ಎಚ್ಚೆತ್ತುಕೊಂಡು ಸಮಯ ಪ್ರಜ್ಞೆಯಿಂದ ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದ ಕುಡುಪು ಸಮೀಪದ ಆಯರಮನೆಯ ಚಂದ್ರಾವತಿ ಅವರನ್ನು ಮಂಗಳೂರು ರೈಲ್ವೆ ಪೊಲೀಸ್ ಅಧಿಕಾರಿಗಳು ಸೆಂಟ್ರಲ್ ನಿಲ್ದಾಣದ ರೈಲ್ವೆ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ ಠಾಣೆಗೆ ಕರೆಯಿಸಿ ಸನ್ಮಾನಿಸಿ ಬೀಳ್ಕೊಟ್ಟಿದ್ದಾರೆ.

ಈ ಸಂದರ್ಭ ಮಾತನಾಡಿದ ಮಂಗಳೂರು ರೈಲ್ವೆ ಪೊಲೀಸ್ ಇನ್‌ಸ್ಪೆಕ್ಟರ್ ಮೋಹನ್ ಕೊಟ್ಟಾರಿ 70ರ ವಯಸ್ಸಿನ ಚಂದ್ರಾವತಿ ಜೀವದ ಹಂಗು ತೊರೆದು ಸಂಭಾವ್ಯ ರೈಲು ದುರ್ಘಟನೆಯನ್ನು ತಪ್ಪಿಸುವ ಮೂಲಕ ಮಾದರಿ ಕಾರ್ಯ ನಡೆಸಿದ್ದಾರೆ. ಚಂದ್ರಾವತಿ ಅವರ ಸಾಧನೆಯನ್ನು ಇಲಾಖೆಯ ಕೇಂದ್ರ ಕಚೇರಿಗೂ ಮಾಹಿತಿ ನೀಡಲಾಗಿದೆ ಎಂದರು.

ರೈಲ್ವೆ ಇಲಾಖೆಯ ಆರ್‌ಪಿಎಫ್ ಎಸ್.ದಿಲೀಪ್ ಕುಮಾರ್, ಚಂದ್ರಾವತಿಯ ಪುತ್ರ ನವೀನ್ ಕುಮಾರ್ ಕುಡುಪು, ಸಂಬಂಧಿಕರಾದ ಉದಯ್ ಕುಡುಪು ಮುಂತಾದವರು ಉಪಸ್ಥಿತರಿದ್ದರು.

 

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...