Tuesday, April 16, 2024

ಅಂಗಡಿಯೊಳಗೆ ನೇಣು ಬಿಗಿದು ಮಾಲಕ ಆತ್ಮಹತ್ಯೆ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ ಆತ್ಮಹತ್ಯೆಗೈದ ಅಂಗಡಿ ಮಾಲಕ ಎಂದು ತಿಳಿದುಬಂದಿದೆ.

ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಇನ್ನು ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...