Thursday, April 11, 2024

ಎಪ್ರಿಲ್ 11 ರಂದು ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ

ವಿಟ್ಲ: ವಿಟ್ಲ ಪಾರ್ಥಂಪಾಡಿ ಶ್ರೀ ಜಟಾಧಾರಿ ದೈವ ಸಾನಿಧ್ಯ ಜೀರ್ಣೋದ್ಧಾರದ ಬಳಿಕ ನಡೆದ ಪ್ರಶ್ನಾ ಚಿಂತನೆಯ ಸಂದರ್ಭದಲ್ಲಿ ದುರ್ಗಾ ದೇವಿಗೆ ನಡೆಯುತ್ತಿದ್ದ ತ್ರಿಕಾಲ ಪೂಜೆ ನಿಂತಿದ್ದು, ವಿಟ್ಲ ಅರಮನೆ, ಅರಮನೆಯ ಭೂಮಿ ಅನುಭವಿಸುವ ಜನರು ದೇವಿಯ ಪ್ರೀತ್ಯರ್ಥ ಹಾಗೂ ದೋಷ ಪರಿಹಾರಾರ್ಥವಾಗಿ ತ್ರಿಕಾಲ ಪೂಜೆಯನ್ನು ನಡೆಸಲು ತೀರ್ಮಾನಿಸಿದ್ದ, ಈ ನಿಟ್ಟಿನಲ್ಲಿ ವಿಟ್ಲ ಅರಮನೆಯಲ್ಲಿ ಎ.11ರಂದು ತ್ರಿಕಾಲ ಪೂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 12 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತ್ರಿಕಾಲ ಪೂಜಾ ಸಮಿತಿ ಸಂಚಾಲಕ ಬಾಬು ಕೆ. ವಿ. ಹೇಳಿದರು.

ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ವಿವರ ನೀಡಿದರು. ಗೇಣಿ ಮೊತ್ತದಲ್ಲಿ ಹಿಂದೆ ನಡೆದು ಕೊಂಡು ಇದ್ದಿರಬಹುದೆಂದು ಹೇಳಲಾಗುತ್ತಿದ್ದು, ಅರಮನೆಯ ನೇರ ಭೂಮಿದಾರರ ಸಹಕಾರದಲ್ಲಿ ಈಗ ಕಾರ್ಯಕ್ರಮ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಎ.೧೦ರಂದು ಶ್ರೀ ಜಠಾಧಾರಿ ದೇವಸ್ಥಾನದಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮೂಲಕ ವಿಟ್ಲ ಅರಮನೆಗೆ ಹೊರೆಕಾಣಿಕೆಯನ್ನು ತೆಗೆದುಕೊಂಡು ಹೋಗುವ ಕಾರ್ಯವನ್ನು ಹಾಕಿಕೊಳ್ಳಲಾಗಿದೆ. ಎ.11ರಂದು ಬೆಳಗ್ಗೆ 6ಕ್ಕೆ ದೀಪಾರಾಧನೆಯ ಮೂಲಕ ತ್ರಿಕಾಲ ಪೂಜೆ ಆರಂಭವಾಗಲಿದ್ದು, ಗಣಪತಿ ಹವನ, ಬೆಳಗ್ಗೆ ೮ಕ್ಕೆ, ಮಧ್ಯಾಹ್ನ 12ಕ್ಕೆ, ರಾತ್ರಿ 7.30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಾದ್ಯಗೋಷ್ಠಿ ಹಾಗೂ ಭಜನೆ ನಡೆಯಲಿದ್ದು, ಸಾಯಂಕಾಲ ೬ಕ್ಕೆ ವಿಟ್ಲ ಸೀಮೆಯ ಚರಿತ್ರೆಯ ವಿಶೇಷ ಅಧ್ಯಯನ ನಡೆಸಿದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತ್ರಿಕಾಲ ಪೂಜಾ ಸಮಿತಿ ಸದಸ್ಯರಾದ ಕೃಷ್ಣಯ್ಯ ಕೆ., ಕೇಶವ ವಿ. ಕೆ., ರಾಮದಾಸ ಶೆಣೈ, ಶೈಲೇಶ್ ಹೇರಳ, ಮನೋಜ್ ಕಾಶಿಮಠ, ಹರೀಶ್ ಪೂಜಾರಿ ಕಾಶಿಮಠ ಉಪಸ್ಥಿತರಿದ್ದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...