Sunday, April 14, 2024

ವಿಠಲ್ ಜೇಸಿ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ವಿಟ್ಲ: ವಿಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆಡಳಿತ ಮಂಡಳಿ, ಶಿಕ್ಷಕರು, ಮತ್ತು ವಿದ್ಯಾರ್ಥಿಗಳು ಸೇರಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ರ 132ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಯಲ್. ಯನ್. ಕೂಡೂರು,ಉಪಾಧ್ಯಕ್ಷರಾದ ಶ್ರೀಧರ್ ಶೆಟ್ಟಿ, ಕಾರ್ಯದರ್ಶಿಗಳಾದ ಮೋಹನ ಎ, ಜತೆ ಕಾರ್ಯದರ್ಶಿ ಶ್ರೀಪ್ರಕಾಶ್, ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ನಿರ್ದೇಶಕರಾದ ಮೋನಪ್ಪ ಶೆಟ್ಟಿ, ಗೋಕುಲ್ ಶೇಟ್, ವಿಜಯಪಾಯ್ಸ್, ಪಾಲ್ಗೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲ ಜಯರಾಮ ರೈ ಸ್ವಾಗತಿಸಿದರು .

ಅಂಬೇಡ್ಕರ್ ಜನ್ಮ ದಿನದ ಮಹತ್ವವನ್ನು ತಿಳಿಸಿದರು. ಆಡಳಿತಾಧಿಕಾರಿ ರಾಧಾಕೃಷ್ಣ ಎ, ಶಿಕ್ಷಕ ಗುರುವಪ್ಪ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More from the blog

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...