Wednesday, April 17, 2024

ನೀವು ವಾಟ್ಸಾಪ್‌ ಅಡ್ಮಿನ್‌ಗಳೇ, ಹಾಗಿದ್ರೆ ಇರಲಿ ಎಚ್ಚರ…!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ಇದೀಗ ವಾಟ್ಸಾಪ್ ಗ್ರೂಪ್‌ನ ಅಡ್ಮಿನ್‌ಗೂ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ ತಟ್ಟಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ವಿ.ಪಿ.ಶಶಿಧರ್ ಎಂಬವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ಕಾರಣ ಕೇಳಿ ಮಾ.30ರಂದು ಜಾರಿ ಮಾಡಿರುವ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುವ ಸಂದರ್ಭ ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಲಾಗಿರುವ ಡಿಸ್ಟ್ರಿಕ್ಟ್ ಮೀಡಿಯಾ ಸರ್ಟಿಫಿಕೇಷನ್ ಆ್ಯಂಡ್ ಮಾನಿಟರಿಂಗ್ ಕಮಿಟಿ ಇವರಿಂದ ಪೂರ್ವ ಅನುಮತಿ ಪಡೆಯಬೇಕಾಗಿರುತ್ತದೆ ಚುನಾವಣಾಧಿಕಾರಿ ಹೇಳಿದ್ದಾರೆ.

ನೀವು ಅಡ್ಮಿನ್ ಆಗಿರುವ ‘ನಮ್ಮ ಕುಶಾಲನಗರ’ ವಾಟ್ಸಾಪ್ ಗ್ರೂಪ್‌ನ ಮೂಲಕ ಯಾವುದೇ ಪೂರ್ವ ಅನುಮತಿ ಪಡೆಯದೆ ರಾಜಕೀಯ ಪ್ರೇರಿತ ಹೇಳಿಕೆಯ ವೀಡಿಯೊ ತುಣುಕನ್ನು ಹಂಚಿಕೊಂಡಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಆದುದರಿಂದ, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಪ್ರಜಾಪ್ರತಿನಿಧಿ ಕಾಯ್ದೆ 1951ರ ರೀತ್ಯ ನಿಮ್ಮ ಮೇಲೆ ಏಕೆ ಕಾನೂನು ಕ್ರಮ ಜರುಗಿಸಬಾರದು ಎಂಬುದಕ್ಕೆ ಈ ನೋಟಿಸ್ ತಲುಪಿದ 24 ಗಂಟೆಯೊಳಗಾಗಿ ಖುದ್ದು ಲಿಖಿತ ಸಮಜಾಯಿಷಿಯನ್ನು ನೀಡುವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾಧಿಕಾರಿ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...