Friday, April 5, 2024

‘ಆಡಿದ ಮಾತನ್ನು ಎಂದೂ ತಪ್ಪುವುದಿಲ್ಲ, ಶಾಸಕತ್ವದ ಸಂಭಾವನೆ ಸಾಮಾಜಿಕ ಕಾರ್ಯಗಳಿಗೆ ಸದ್ವಿನಿಯೋಗ ‘-ಅಶೋಕ್ ರೈ

ವಿಟ್ಲ: ಹಿಂದುತ್ವದ ಅಜೆಂಡಾದಲ್ಲಿ ಮತ ಯಾಚನೆ ಮಾಡುವ ಬಿಜೆಪಿ ತನ್ನ ಆಡಳಿತದ ಅವಧಿಯಲ್ಲಿ ಅಸಮರ್ಪಕ ದಾಖಲೆಯ ದೇವಸ್ಥಾನ, ದೈವಸ್ಥಾನಗಳ ಜಾಗದ ರೆಕಾರ್ಡ್ ಯಾಕೆ ಸರಿ‌ ಪಡಿಸಲು ಸಾಧ್ಯವಾಗಿಲ್ಲ, ಕಳೆದ ಐದು ವರ್ಷಗಳಿಂದ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡುವುದಾಗಿ ಹೇಳುತ್ತಿದ್ದ ಶಾಸಕರಿಗೆ ಕನಿಷ್ಠ ಫೌಂಡೇಷನ್ ಹಾಕಲು ಆಗಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಅವರು ಪುಣಚದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಶಾಸಕರು ಮನಸ್ಸು ಮಾಡಿದ್ದರೆ ಅವರು ಭ್ರಷ್ಟಾಚಾರ ಮಾಡಿದ ದುಡ್ಡಲ್ಲೇ ಫೌಂಡೇಷನ್ ಕಟ್ಟಬಹುದಿತ್ತು ಎಂದರು. ಬಿಜೆಪಿಗೆ ಪುತ್ತೂರಿನಲ್ಲಿ ಸಮರ್ಥ ಅಭ್ಯರ್ಥಿಯೇ ಇಲ್ಲದಂತಹ ಪರಿಸ್ಥಿತಿ‌ ಉದ್ಭವವಾಗಿದೆ. ಆರ್ಯಾಪು ಗ್ರಾಮಪಂ‌ಚಾಯತ್ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಅಕ್ರಮ ಸಕ್ರಮದ ಅವ್ಯವಹಾರವನ್ನು ಬಯಲು ಮಾಡಿದ್ದಾರೆ ಎಂದ ಅವರು ನಾನು ಗೆದ್ದು ಬಂದರೆ ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೂ ನಾನು ಸ್ಪಂದಿಸುತ್ತೇನೆ. ನನ್ನ ಶಾಸಕತ್ವದ ಸಂಭಾವನೆಯನ್ನು ಟ್ರಸ್ಟ್ ನ ಸಾಮಾಜಿಕ ಕಾರ್ಯಗಳಿಗೆ ಹಂಚುತ್ತೇನೆ ಎಂದು ವಾಗ್ದಾನ ನೀಡಿದರು.

ಕಾಂಗ್ರೆಸ್ ಮುಕ್ತ ಭಾರತದ ಬಿಜೆಪಿ ಕನಸು ಬಿಜೆಪಿಗೆ ತಿರುಗುಬಾಣವಾಗಿದ್ದು, ಬಿಜೆಪಿ ಪರ ಇರುವ ಜನರಿಂದಲೇ ಬಿಜೆಪಿ ಮುಕ್ತದತ್ತ ಸಾಗಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದರು.

ನಾನು ಒರಿಜಿನಲ್ ಬಿಜೆಪಿ, ನನಗೆ ಬಿಜೆಪಿಯೇ ಎಲ್ಲಾ ಎಂದು ಹೇಳಿ ಬಿಜೆಪಿಯಲ್ಲೇ ಉಳಿದಿರುವ ಕಾರ್ಯಕರ್ತರನ್ನು, ನಾಯಕರನ್ನು ಬಿಜೆಪಿ ಒಂದು ಹಂತದ ಬಳಿಕ ಪಕ್ಷದಿಂದ ತುಳಿಯುತ್ತದೆ ಹೀಗೆ ತುಳಿತಕ್ಕೊಳಗಾಗುವ ಮುನ್ನವೇ ಕಾಂಗ್ರೆಸ್ ಸೇರಿಕೊಳ್ಳಿ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಬಿಜೆಪಿ ಕಾರ್ಯಕರ್ತರಿಗೆ ಆಹ್ವಾನ ನೀಡಿದರು.
ಕಾಂಗ್ರೆಸ್ ಪಕ್ಷದಿಂದ ಸಮರ್ಥ ಅಭ್ಯರ್ಥಿಯನ್ನು ಈ ಬಾರಿ ಕಣಕ್ಕಿಳಿಸಿದ್ದೇವೆ .ಅಶೋಕ ರೈ ಯವರನ್ನು ಬೆಂಬಲಿಸಿ,ಕಾಂಗ್ರೆಸ್ ಜೊತೆ ಕೈ ಜೋಡಿಸಿ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್ ಜನಪರ ಕೆಲಸಕ್ಕೆ ಒಲವು ತೋರದ ಬಿಜೆಪಿ ಸರಕಾರವನ್ನು ಕಿತ್ತೆಸೆಯಬೇಕಾದ ಅನಿವಾರ್ಯತೆ ಜನತೆಯ ಪಾಲಿಗೆ ಬಂದೊದಗಿದೆ. ಅಶೋಕ್ ಕುಮಾರ್ ರೈಯವರು ಬಿಜೆಪಿ ಪಕ್ಷದಲ್ಲಿದ್ದರೂ ಕೋಮುವಾದಿ, ಜಾತಿವಾದಿಯಾಗಿರಲಿಲ್ಲ. ಸಂಪಾದನೆಯ ಒಂದಂಶವನ್ನು ಬಡವರ್ಗಕ್ಕೆ ನೀಡುವ ಕೆಲಸ ಅವರ ಟ್ರಸ್ಟ್ ನ ಮುಖಾಂತರ ಕೊಡುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈಗೆ ಗೆಲುವಾಗುವುದನ್ನು ಯಾವ ಶಕ್ತಿಗಳಿಗೂ ತಡೆಯಲು ಸಾಧ್ಯವಿಲ್ಲ ಎಂದರು.

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಉಸ್ತುವಾರಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ವಕ್ತಾರ ರಮಾನಾಥ್ ವಿಟ್ಲ, ವೇದನಾಥ ಸುವರ್ಣ, ಹಿರಿಯ ಮುಖಂಡ ವಿಠಲ ರೈ ಬೈಲುಗುತ್ತು, ಪದ್ಮನಾಭ ಪೂಜಾರಿ ಅಳಿಕೆ, ಅಬ್ದುಲ್ ಕರೀಂ ಕುದ್ದುಪದವು, ಶ್ರೀಧರ ಶೆಟ್ಟಿ ದೇವರಗುಂಡಿ, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದಿಂದ ಬಂದ ಹತ್ತಾರು ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಸೇರ್ಪಡೆಗೊಳಿಸಲಾಯಿತು. ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಹಿತ್ತಿಲು, ಕಾರ್ಯದರ್ಶಿ ಸಿರಾಜ್ ಮಣಿಲ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪ್ರತಿಭಾ ಶ್ರೀಧರ ಶೆಟ್ಟಿ ಸಹಕರಿಸಿದರು.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....