Friday, April 12, 2024

ಕಾರ್ಯಕರ್ತರ ಭಾವನೆಗಳಿಗೆ ಆಗಿರುವ ನೋವಿನ ಧ್ವನಿಯಾಗಿ ನಿಲ್ಲುವ ಅನಿವಾರ್ಯತೆಯಿದೆ’- ಅರುಣ್ ಕುಮಾರ್ ಪುತ್ತಿಲ

ವಿಟ್ಲ: ಸಮಾಜಕ್ಕೆ ಶಕ್ತಿಯಾಗಬೇಕಾದ ಯುವಕರು ಬೀದಿಯ ಹೆಣವಾಗುತ್ತಿರುವ ದಿನದಲ್ಲಿ ನಾವಿದ್ದೇವೆ. ವಿಶ್ವಾಸದ ರಾಜಕಾರಣವನ್ನು ಮಾಡುವ ಮೂಲಕ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಾಗುವುದು. ಕಾರ್ಯಕರ್ತರ ಭಾವನೆಗಳಿಗೆ ಆಗಿರುವ ನೋವಿನ ಧ್ವನಿಯಾಗಿ ನಿಲ್ಲುವ ಅನಿವಾರ್ಯತೆ ಎದುರಾಗಿದೆ. ದುರಾಡಳಿತದ ಮೂಲಕ ಕಾಂಗ್ರೆಸ್ ಸಮಾಜವನ್ನು ಒಡೆಯುವ ಕಾರ್ಯ ಮಾಡಿದೆ. ದೇಶದ್ರೋಹ, ಅಶಾಂತಿ, ಮತಾಂಧತೆಯನ್ನು ತಡೆಯುವ ನಿಟ್ಟಿನಲ್ಲಿ ಕೆಲಸ ಕಾರ್ಯ ನಡೆಯಬೇಕಾಗಿದೆ ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಅವರು ಗುರುವಾರ ವಿಟ್ಲ ಮಹಿಮೆಯ ಗದ್ದೆಯಲ್ಲಿ ನಡೆದ ಸೀತಾರಾಮ ಪರಿವಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿ ದೇಶಕ್ಕೆ ಮೋದಿ, ಯುಪಿಗೆ ಯೋಗಿ, ಪುತ್ತೂರಿಗೆ ಪುತ್ತಿಲ ಎನ್ನುವ ರೀತಿಯಲ್ಲಿ ವೈಯಕ್ತಿಕ ವರ್ಚಸ್ಸು ದೇಶಕ್ಕೆ ತೋರಿಸುವ ಕಾರ್ಯವಾಗಿದೆ. ಪಕ್ಷ ಪುತ್ತೂರನ್ನು ಕಳೆದುಕೊಳ್ಳಬಹುದು, ಆದರೆ ಹಿಂದುತ್ವ ಪುತ್ತೂರನ್ನು ಕಳೆದುಕೊಂಡಿಲ್ಲ. ವಿಟ್ಲದಲ್ಲಿ ಪುತ್ತಿಲರ ಚುನಾವಣೆಯ ಪ್ರಚಾರ ನಡೆದದ್ದು ಅಲ್ಲ, ಹಿಂದು ಸಮಾಜೋತ್ಸವದ ರೀತಿಯಲ್ಲಿ ಜನಸ್ತೋಮ ನಡೆದಿದೆ. ಪುತ್ತೂರಿನಲ್ಲಿ ಅಭಿವೃದ್ಧಿಯ ಧ್ವಜ ಹಾರಿಸುವ ಸಾಮರ್ಥ್ಯವನ್ನು ಪುತ್ತಿಲ ಹೊಂದಿದ್ದಾರೆ. ಕಾರ್ಯಕರ್ತರಿಗೆ ಸ್ವಂತಿಕೆ ಇದ್ದು,
ಸತ್ಯವನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮುಖಂಡರಾದ ಡಾ. ಸುರೇಶ್ ಪುತ್ತೂರಾಯ, ಡಾ. ಗಣೇಶ್ ಮುದ್ರಾಜೆ, ಉದ್ಯಮಿ ರಾಜಶೇಖರ ಬನ್ನೂರು, ವಿಟ್ಲ ಗ್ರಾಮ ಪಂಚಾಯಿತಿ ಸದಸ್ಯ ರಘುರಾಮ ವಿಟ್ಲ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸಂಧ್ಯಾಮೋಹನ್ ಉಪಸ್ಥಿತರಿದ್ದರು.

ಸುಕನ್ಯಾ ಸೇರಾಜೆ ಪ್ರಾರ್ಥಿಸಿದರು. ಶ್ರೀಕೃಷ್ಣ ವಿಟ್ಲ ಸ್ವಾಗತಿಸಿದರು. ಸದಾಶಿವ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

ಪೋಟೋ ಕ್ಲಿಕ್ಕಿಸಲು ಮುಗಿಬಿದ್ದ ಜನಸ್ತೋಮ:

ಸೀತಾರಾಮ ಪರಿವಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಅರುಣ್ ಕುಮಾರ್ ಪುತ್ತಿಲ ಅವರ ಜತೆಗೆ ಸೆಲ್ಫಿ ತೆಗೆಯುವ ನಿಟ್ಟಿನಲ್ಲಿ ಮುಗಿಬಿದ್ದರು. ಪ್ರತಿಯೊಬ್ಬರನ್ನು ಗೌರವದಿಂದ ನಡೆಸಿಕೊಳ್ಳುವ ಮೂಲಕ ಸಂಸ್ಕೃತಿಯನ್ನು ಎತ್ತಿ ಹಿಡಿದರು.

ಅದ್ದೂರಿ ರೋಡ್ ಶೋ:

ಸೀಗೆಬಲ್ಲೆ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ, ವಿಟ್ಲ ಚಂದ್ರನಾಥ ಬಸದಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಬಳಿಕ ಬಸದಿ ಬಳಿಯಿಂದ ಮಹಾ ಸಂಗಮ ಬೃಹತ್ ರೋಡ್ ಶೋ ವಿಟ್ಲದ ರಾಜಬೀದಿಗಳಲ್ಲಿ ಸಂಚರಿಸಿ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಸಮೀಪಕ್ಕೆ ಸಾಗಿತು. ಸುಮಾರು 3 ಸಾವಿರಕ್ಕೂ ಅಧಿಕ ಮಂದಿ ರೋಡ್ ಶೋ ನಲ್ಲಿ ಭಾಗವಹಿಸಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...