Wednesday, April 17, 2024

ಬಂಟ್ವಾಳದಲ್ಲಿ ಜೆ.ಡಿ.ಎಸ್ ಅಭ್ಯರ್ಥಿ ಪ್ರಕಾಶ್ ಗೊಮ್ಸ್ ಗೆ ಮತ ನೀಡಿ ಗೆಲ್ಲಿಸಿ- ಹಾರೂನ್ ರಶೀದ್

ಬಂಟ್ವಾಳ: 2023 ರ ರಾಜ್ಯದ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ನೀಡಲಿದ್ದು ರಾಜ್ಯದಲ್ಲಿ ಕುಮಾರ ಸ್ವಾಮಿ ನೇತೃತ್ವದ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬರುತ್ತದೆ ಹಾಗಾಗಿ ಬಂಟ್ವಾಳದಲ್ಲಿ ಜೆ.ಡಿ.ಎಸ್.ಅಭ್ಯರ್ಥಿ ಪ್ರಕಾಶ್ ಗೊಮ್ಸ್ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ದ.ಕ.ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಾರೂನ್ ರಶೀದ್ ಮನವಿ ಮಾಡಿದರು.

ಅವರು ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜನತೆ ಎರಡು ಪಕ್ಷಗಳ‌ ಆಡಳಿತದಿಂದ ಬೆಸೆತ್ತು ಪರ್ಯಾಯವಾಗಿ ಜೆಡಿಎಸ್ ಪಕ್ಷಕ್ಕೆ ಮತ ನೀಡಲಿದ್ದಾರೆ. ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಕಾರಣ ಎರಡು ಪಕ್ಷಗಳ‌ನ್ನು ಜನತೆ ದೂರಮಾಡಿ ಬಡವರ ಕಲ್ಯಾಣಕ್ಕಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಅಭ್ಯರ್ಥಿ ‌ಪ್ರಕಾಶ್ ಗೂಮ್ಸ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಜೆ.ಡಿ.ಎಸ್.ಪಕ್ಷವನ್ನು ಬೆಂಬಲಿಸಲು ಮನವಿ ಮಾಡಿದರು.

ಉಮೇಶ್ ಕುಮಾರ್ ವೈ, ಫವಾಜ್ ಬಂಟ್ವಾಳ, ಇಬ್ರಾಹಿಂ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...