Sunday, April 14, 2024

ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಭಜರಂಗದಳ ಕಾರ್ಯಕರ್ತ ಮಹೇಂದ್ರ ನನ್ನು ಸಂಸದ ನಳಿನ್ ಹಾಗೂ ಶಾಸಕ ರಾಜೇಶ್ ನಾಯ್ಕ್ ಭೇಟಿ

ಕಾಂಗ್ರೇಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಆರೋಗ್ಯ ವಿಚಾರಿಸಿದರು.

‌ಮಧ್ಯಾಹ್ನದ ವೇಳೆ ಮಾಣಿ ಎಂಬಲ್ಲಿ ಓಮ್ನಿ ಕಾರಿನಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಭಜರಂಗದಳ ಕಾರ್ಯಕರ್ತ ಮಹೇಂದ್ರ ಎಂಬವನಿಗೆ ಡಿಕ್ಕಿ ಹೊಡೆದು ಬಳಿಕ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು.
ಗಂಭೀರವಾಗಿ ಹಲ್ಲೆಗೊಳಗಾದ ಮಹೇಂದ್ರ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಅವರನ್ನು ಕೂಡಲೇ ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಾರ್ಯಕರ್ತರ ಜೊತೆ ನಾವಿದ್ದೇವೆ: ಶಾಸಕ ರಾಜೇಶ್ ನಾಯ್ಕ್
ವಿಧಾನ ಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಈ ವಿಚಾರ ತಿಳಿದ ಕೂಡಲೇ ಮಂಗಳೂರು ಪೋಲೀಸ್ ವರಿಷ್ಢಾಧಿಕಾರಿಯನ್ನು ಪೋನ್ ಮುಖಾಂತರ ಸಂಪರ್ಕ ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಅವರು ತಿಳಿಸಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಲ್ಲಿ ಶಾಂತಿ ಕದಡುವ ವ್ಯಕ್ತಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ ಅವರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ನಡೆಸಿ ಶಾಂತಿಭಂಗ ಉಂಟುಮಾಡಿದರೆ ಅವರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅವರು ತಿಳಿಸಿದರು.
ಹಿಂದೂ ಕಾರ್ಯಕರ್ತರ ಮೇಲಿನ‌ ದೌರ್ಜನ್ಯವನ್ನು ಖಂಡಿಸಿದ ಅವರು ಯಾವತ್ತೂ ನಿಮ್ಮ ಜೊತೆ ನಾವಿದ್ದೇವೆ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಬೃಜೇಶ್ ಚೌಟ, ಸುದರ್ಶನ ಬಜ, ಗಣೇಶ್ ರೈ ಮಾಣಿ, ಹರೀಶ್ ಶೆಟ್ಟಿ ಪೆರಾಜೆ, ವಿನೀತ್ ಪೆರಾಜೆ, ಸಂಪತ್ ಸುವರ್ಣ ಕಡೇಶಿವಾಲಯ,ವಿಜಯ ಮಾಣಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...