


ಬಿ.ಸಿ.ರೋಡ್ ಪೊಲೀಸ್ ಲೇನ್ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಟ್ರಸ್ಟ್ (ರಿ.) ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಮೇ.27 ರಿಂದ 28 ರವರೆಗೆ ತಂತ್ರಿಗಳ ನೇತ್ರತ್ವದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ ನಡೆಯಲಿದೆ.
ಜೂನ್ 12 ರಂದು ಬೆಳಿಗ್ಗೆ 9.02 ಕರ್ಕಟ ಲಗ್ನ ಶುಭ ಮುಹೂರ್ತದಲ್ಲಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.
ಇದರ ಪ್ರಯುಕ್ತ ದೇವಸ್ಥಾನವನ್ನು ತೆರವುಗೊಳಿಸುವ ಕೆಲಸ ಕಾರ್ಯವನ್ನು ಶ್ರಮದಾನದ ಮೂಲಕ ಪ್ರಾರಂಭಿಸಲಾಗುವುದು. ಅದುದರಿಂದ ಮೇ.28 ರಂದು ಆದಿತ್ಯವಾರ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸ್ವಯಂ ಪ್ರೇರಿತರಾಗಿ ಕ್ಷೇತ್ರದಲ್ಲಿ ನಡೆಯುವ ಶ್ರಮದಾನದಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಆಡಳಿತ ಸೇವಾ ಟ್ರಸ್ಟ್ (ರಿ) ಕಾರ್ಯದರ್ಶಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇನ್ನು ಶ್ರಮದಾನಕ್ಕೆ ಆಗಮಿಸುವ ಭಕ್ತಾದಿಗಳು ಮುಂಚಿತವಾಗಿ ತಿಳಿಸುವಂತೆ ಮನವಿ ಮಾಡಿದ್ದಾರೆ.


