Sunday, April 7, 2024

‘ಬೇರ’ ಸಿನಿಮಾದ ಟೀಸರ್ ಬಿಡುಗಡೆ… ಎಸ್‌ಎಲ್‌ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ್ ನೇರ್ಲಾಜೆ ನಿರ್ಮಾಣದ ‘ಬೇರ’ ಸಿನಿಮಾ

ವಿಟ್ಲ: ಕೋಸ್ಟಲ್‌ವುಡ್‌ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್‌ವುಡ್‌ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ ಹಿಂದೆ ಕರಾವಳಿಯ ಅಪ್ಪಟ ಟ್ಯಾಲೆಂಟ್‌ಗಳು ಕೆಲಸ ಮಾಡುತ್ತಿವೆ ಎಂಬುವುದು ಉಲ್ಲೇಖನೀಯ. ಚಿತ್ರದ ನಿರ್ಮಾಣ, ನಿರ್ದೇಶನ, ನಟನೆ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕೋಸ್ಟಲ್ ಪ್ರತಿಭೆಗಳು ಸೈ ಅನ್ನಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕರಾವಳಿಗರ ಸಿನಿಮಾ ಅಂದ್ರೆ ಅದೇನೊ ಒಂಥರಾ ಅರಿವಿಲ್ಲದೆ ಒಂದು ರೀತಿಯ ಎಕ್ಸೈಟ್‌ಮೆಂಟ್ ಹುಟ್ಟಿ ಬಿಡುತ್ತದೆ.

ಇಲ್ಲೊಂದು ಕರಾವಳಿಗ ಚಿತ್ರತಂಡ ಹೊಸ ಕಥೆಯೊಂದಿಗೆ ಸದ್ದು ಮಾಡಲು ಹೊರಟಿವೆ. ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ ‘ಬೇರ’ ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಉದ್ಯಮಿ ದಿವಾಕರ ದಾಸ್ ನಿರ್ಮಾಣದ ‘ಬೇರ’ ಸಿನಿಮಾದ ಟೀಸರ್ ಬಿಡುಗಡೆ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.
ಎಸ್ ಎಲ್ ವಿ ಕಲರ್ಸ್ ಲಾಂಛನ ಮತ್ತು ಸಿನಿಮಾ ದ ಟೀಸರ್‌ನ್ನು ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಬೇರ ಚಿತ್ರದ ಟೀಸರ್ ಮೇ 1ರಂದು ಬಿಡುಗಡೆಗೊಂಡಿತು.

ಸಿನಿಮಾ ನಿರ್ದೇಶಕ ವಿನು ಬಳಂಜ ಮಾತನಾಡಿ “ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ‘ಯಾವ ತಾಯಂದ್ರ ಮಕ್ಕಳೂ ಇನ್ನೊಬ್ರಿಂದಾಗಿ ಸಾಯ್ಬಾರ್ದು’ ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತದೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ” ಎಂದು ಹೇಳಿದರು.

ಸಿನಿಮಾ ನಿರ್ಮಾಪಕ ದಿವಾಕರ್ ದಾಸ್ ನೇರ್ಲಾಜೆ ಮಾತನಾಡಿ “ಕೇವಲ ಮೂರು ಜನ ಕೆಲಸಗಾರರಿಂದ ಶುರುವಾದ ಎಸ್ ಎಲ್ ವಿ ಸಂಸ್ಥೆಯಲ್ಲಿ ಇಂದು ನೂರೈವತ್ತು ಜನ ಕೆಲಸಗಾರರಿದ್ದಾರೆ. ಈಗ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ “ಬೇರ” ಎಂಬ ಮೊದಲ ಚಿತ್ರ ನಿರ್ಮಾಣ ಮಾಡಿದ್ದೇವೆ. ಈ ಚಿತ್ರಕ್ಕೆ ನಿಮ್ಮ ಹಾರೈಕೆ ಇರಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿನಿಮಾ ಛಾಯಾಗ್ರಾಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ ವಿಟ್ಲ, ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣಚ್ಛ, ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಸೇರಿದಂತೆ ಹಲವಾರು ಕಲಾವಿದರು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...