Sunday, April 7, 2024

ಅಕ್ರಮ ಜಾನುವಾರು ಸಾಗಾಟ : ಆರೋಪಿಗಳು ಅರೆಸ್ಟ್

ಬಂಟ್ವಾಳ: ಯಾವುದೇ ಪರವಾನಿಗೆ ಇಲ್ಲದೇ ವಧೆ ಮಾಡವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ದನ, ಹಾಗೂ ಕರುವೊಂದನ್ನು ಬಂಟ್ವಾಳ ನಗರ ಪೊಲೀಸರು ರಕ್ಷಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಮಕೃಷ್ಣ ಪಿಎಸ್ಐ ಅವರು ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಗಣೇಶ್ ನಗರ ಎಂಬಲ್ಲಿ ಸಿಬ್ಬಂದಿ ಹಾಗೂ ಪಂಚರೊಂದಿಗೆ ಗಸ್ತುನಲ್ಲಿದ್ದ ವೇಳೆ ಸುಮಾರು 11:30 ಗಂಟೆಗೆ ವಿಟ್ಲ ಕಡೆಯಿಂದ ಬರುತ್ತಿದ್ದ ಟೆಂಪೋ ವಾಹನವನ್ನು ನಿಲ್ಲಿಸಿ, ತಪಾಸಣೆ ನಡೆಸಿದ್ದಾರೆ. ಈ ವೇಳೆ ಟೆಂಪೋ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ವಧೆ ಮಾಡಲು ಸಾಗಾಟ ಮಾಡುತ್ತಿದ್ದ ದನ, ಹಾಗೂ ಕರುವೊಂದನ್ನು ವಶಕ್ಕೆ ಪಡೆದುಕೊಂಡು, ಆರೋಪಿಗಳಾದ ಪುದು ಗ್ರಾಮದ ಬಶೀರ್ ಕೆ ಹಾಗೂ ಒಕ್ಕೆತ್ತೂರು ಗ್ರಾಮದ ಜೆರಾಲ್ಡ್ ಮಸ್ಕರೇನಸ್ ಎಂಬವರನ್ನು ದಸ್ತಗಿರಿ ಮಾಡಿದ್ದಾರೆ.

ಇನ್ನು ಬಂಧಿತರಿಂದ ಸುಮಾರು ರೂ.13,000 ಮೌಲ್ಯದ ದನ, ಸುಮಾರು ರೂ.3,000 ಮೌಲ್ಯದ ದನದ ಕರು ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ರೂ.75,000 ಮೌಲ್ಯದ ಟೆಂಪೋ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...