Saturday, April 6, 2024

ಇಲಿಪಾಷಾಣ ಸೇವಿಸಿ ಕೆಯ್ಯೂರಿನ ಯುವತಿ ಸಾವು

ಪುತ್ತೂರು: ಕೆಯ್ಯೂರಿನ ಯುವತಿಯೋರ್ವರು ಬೆಂಗಳೂರಿನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಯ ಏಕೈಕ ಪುತ್ರಿ ಶ್ರುತಿ ಸಿ.ರೈ ಮೃತಪಟ್ಟವರು.

ಕಳೆದೆರಡು ವರ್ಷಗಳಿಂದ ಬೆಂಗಳೂರಿನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಅವರು ಅಲ್ಲೇ ವಾಸ್ತವ್ಯವಿದ್ದರು. ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು. ಬಾಡಿಗೆ ರೂಮಲ್ಲಿದ್ದ ಅವರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ವಿಷಯ ತಿಳಿದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಏ.30ರಂದು ಮೃತಪಟ್ಟಿದ್ದು ಮೇ 1ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಏಕೈಕ ಪುತ್ರಿಯನ್ನು ಕಳೆದುಕೊಂಡಿರುವ ಚಂದ್ರಶೇಖರ್ ರೈ ಕುಟುಂಬ ದು:ಖಸಾಗರದಲ್ಲಿ ಮುಳುಗಿದೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...