Saturday, April 6, 2024

ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಂಭ್ರಮ, ಸಡಗರ ನಾಳೆ: ಇನ್ನೂರ ಒಂದು ಜೋಡಿ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೀಗ ಮದುವೆ ಮನೆಯ ಸಂಭ್ರಮ, ಸಡಗರ ಮನೆ ಮಾಡಿದೆ.

ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಇನ್ನೂರ ಒಂದು ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ.

ಇಂದು ಮಂಗಳವಾರ ಅವರ ದಾಖಲೆಗಳನ್ನೆಲ್ಲಾ ಪರಿಶೀಲಿಸಿ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ-ಶಾಲು ನೀಡಲಾಗುವುದು.

ಬುಧವಾರ ಸಂಜೆ 5 ಗಂಟೆಯಿಂದ ಭವ್ಯ ಮೆರವಣಿಗೆಯಲ್ಲಿ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಹೋಗುವರು.

ಅಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಚಲನಚಿತ್ರ ನಟ ತೂಗುದೀಪ ದರ್ಶನ್ ಮೊದಲಾದ ಗಣ್ಯರು ಮಂಗಲಸೂತ್ರ ವಿತರಿಸುವರು. ವೇದ-ಮಂತ್ರ ಘೋಷ ಪಠಣದೊಂದಿಗೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದAತೆ ನಡೆಯುತ್ತದೆ. ಬಳಿಕ ದೇವರದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ನೂತನ ದಂಪತಿಗಳು ಅವರ ಊರಿಗೆ ತೆರಳುವರು.

ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ೧೯೭೨ ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಿದ್ದು ಪ್ರತಿವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷದವರೆಗೆ ೧೨,೫೭೬ ಜೊತೆ ಧರ್ಮಸ್ಥಳದಲ್ಲಿ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...