Friday, April 5, 2024

ಈಡೇರದ ಸೇತುವೆ ಭರವಸೆ… ಮತ ಚಲಾಯಿಸದೇ ಆಕ್ರೋಶ; ಶ್ರಮಸೇವೆಯಲ್ಲಿ ಮತದಾರರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ಕುಜುಂಬಾರ್ ಎಂಬಲ್ಲಿ ಸೇತುವೆ ನಿರ್ಮಿಸುವಂತೆ ಬೇಡಿಕೆ ಈಡೇರಿಸಿದ್ದರೂ, ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ಆ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೇ, ಹೊಳೆಗೆ ಮರದ ಸಂಕ ನಿರ್ಮಿಸಲು ಶ್ರಮಸೇವೆ ನಡೆಸಿದ ಘಟನೆ ನಡೆದಿದೆ.

ಕಡಬ ತಾಲೂಕಿನ ಕುಜುಂಬಾರು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಹಲವಾರು ವರ್ಷಗಳಿಂದ ಬೇಡಿಕೆ, ಮನವಿ ಸಲ್ಲಿಸಿದ್ದರೂ ಸಂಬಂಧಿಸಿದವರು ನಿರ್ಲಕ್ಷ್ಯ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಇಲ್ಲಿನ ಜನ ಸೇತುವೆ ನಿರ್ಮಿಸದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರದೊಂದಿಗೆ ಬ್ಯಾನರ್ ಅಳವಡಿಸಿದ್ದರು. ಈ ವೇಳೆ ಸ್ಥಳೀಯ ಅಧಿಕಾರಿಗಳು ಆಗಮಿಸಿ ಜನರ ಮನವೊಲಿಸಿದ್ದರು. ಸೇತುವೆ ನಿರ್ಮಿಸದಿದ್ದಲ್ಲಿ ಮತದಾನ ಬಹಿಷ್ಕಾರ ಎಂಬ ನಿರ್ಧಾರಕ್ಕೂ ಅಂದೇ ಬಂದಿದ್ದರು.

ಆದರೂ ಸೇತುವೆ ನಿರ್ಮಿಸುವ ಬಗ್ಗೆ ಯಾವುದೇ ಭರವಸೆ ನೀಡದಾ ಹಿನ್ನಲೆಯಲ್ಲಿ ಕುಜುಂಬಾರು ಪರಿಸರದ ಸುಮಾರು ೩೦ ಮನೆಗಳ ೮೦ ಕ್ಕೂ ಅಧಿಕ ಜನರು ಮತ ಚಲಾಯಿಸಿಲ್ಲ. ಬದಲಿಗೆ, ಹೊಳೆಗೆ ಸಂಪರ್ಕ ಕಲ್ಪಿಸುವ ಪಾಲ ನಿರ್ಮಾಣದಲ್ಲಿ ಶ್ರಮಸೇವೆ ನಡೆಸಿ ಸಂಬAಧಿಸಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಹಲವು ವರ್ಷಗಳಿಂದ ಬೇಡಿಕೆ ಇರಿಸಿದ್ದೇವೆ. ಆದರೂ ಸ್ಪಂಧಿಸುತ್ತಿಲ್ಲ, ಭರವಸೆ ನಿಡಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಲಾಗಿದೆ. ಇಂದು ವಿಧಾನ ಸಭಾ ಚುನಾವಣೆ ಬಹಿಷ್ಕರಿಸಿದ್ದೇವೆ. ಮುಂದೆಯೂ ಸೇತುವೆ ಆಗದಿದ್ದರೆ, ಎಂಪಿ ಚುನಾವಣೆಯನ್ನು ಬಹಿಷ್ಕಾರಿಸುತ್ತೇವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿಮ್ಮ ಓಟು ನಮಗೆ ಅಗತ್ಯವಿಲ್ಲ ಎಂಬ ಮಾತನ್ನೂ ನಾವು ಕೇಳಬೇಕಾಗಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...