Saturday, April 6, 2024

ಬಂಟ್ವಾಳ ಕ್ಷೇತ್ರದಲ್ಲಿ 25 ಸಾವಿರಕ್ಕಿಂತಲೂ ಅಧಿಕ ಅಂತರದಲ್ಲಿ ರಾಜೇಶ್ ನಾಯ್ಕ್ ಗೆಲುವು ನಿಶ್ಚಿತ-ಹರಿಕೃಷ್ಣ ಬಂಟ್ವಾಳ

ಬಂಟ್ವಾಳ: ಕ್ಷೇತ್ರದ ಪ್ರತಿ ಮನೆಯನ್ನು ಬಿಜೆಪಿ ಕಾರ್ಯಕರ್ತರು ಬೇಟಿ ಮಾಡಿದ್ದು, ಬಂಟ್ವಾಳ ಕ್ಷೇತ್ರದಲ್ಲಿ 25 ಸಾವಿರಕ್ಕಿಂತಲೂ ಅಧಿಕ ಅಂತರದಲ್ಲಿ ರಾಜೇಶ್ ನಾಯ್ಕ್ ಅವರ ಗೆಲುವು ನಿಶ್ಚಿತ , ಎಂದು ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ತಿಳಿಸಿದರು.

ಅವರು ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು .

ರಾಜ್ಯದಲ್ಲಿ 120 ಕ್ಕೂ ಅಧಿಕ ಸ್ಥಾನವನ್ನು ಪಡೆಯುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಸಿರೋಡಿಗೆ ಯೋಗಿ‌ ಆಧಿತ್ಯನಾಥ್ ಅವರು ಆಗಮಿಸಿದ ವೇಳೆ ಸೇರಿದ ಕಾರ್ಯಕರ್ತರನ್ನು ನೋಡಿ ಕಾಂಗ್ರೆಸ್ ಸೋಲಿನ ಭೀತಿಯಿಂದ ಹತಾಶೆಯಿಂದ ಕೊನೆಗಳಿಗೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಅವರ ಕೈಕಾಲು ಹಿಡಿಯಲು ಹೋಗಿದ್ದಾರೆ.

ಅವರ ಮೂಲಕ ಕಾಂಗ್ರೇಸ್ ಪರವಾಗಿ ಹೇಳಿಕೆ ನೀಡುವಂತೆ ಒತ್ತಾಯ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಈ ಬಾರಿ ಕಾಂಗ್ರೇಸ್ ನವರ ತಂತ್ರ,ಮಂತ್ರಗಳು ಫಲಿಸುವುದಿಲ್ಲ,ಕ್ಷೇತ್ರದಲ್ಲಿ ನಡೆಸಲಾದ ಅಭಿವೃದ್ಧಿ ಕಾರ್ಯಗಳು ಹಾಗೂ ಶಾಂತಿಯ ಬಂಟ್ವಾಳವಾಗಿ ಮಾರ್ಪಾಡು ಮಾಡಿದ ರಾಜೇಶ್ ನಾಯ್ಕ್ ಗೆಲುವು ಸಾಧಿಸುವುದು ನೂರಕ್ಕೆ ನೂರು ಸತ್ಯ ಎಂದು ಅವರು ತಿಳಿಸಿದರು.

ಸುಳ್ಳು, ಅಪಪ್ರಚಾರ, ಮೋದಿಯನ್ನು ಬೈಯುವುದು ಈ ಮೂಲಕ ಅಧಿಕಾರ ಪಡೆಯುವುದು ಮಾತ್ರ ಕಾಂಗ್ರೇಸ್ ಅಜೆಂಡಾ, ಬಡತನ ಮುಕ್ತ ಭಾರತ, ಆತ್ಮನಿರ್ಭರ ಭಾರತ, ವಿಶ್ವಗುರು ಭಾರತ, ಅಭಿವೃದ್ಧಿ ಹಾಗೂ ಶಾಂತಿ ಬಿಜೆಪಿ ಅಜೆಂಡಾ ಅಗಿದೆ ಎಂದು ಅವರು ತಿಳಿಸಿದರು.

ಕ್ರಿಮಿನಲ್ ದಂದೆಯ ರಾಜಕಾರಣಿಗಳನ್ನು ರಾಜಕೀಯದಲ್ಲಿ ಪರಿಚಯಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಕೆಲವು ಉದಾಹರಣೆಗಳ ಮೂಲಕ ಆರೋಪ ವ್ಯಕ್ತಪಡಿಸಿದರು.

ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ , ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಪ್ರಮುಖ ಪುರುಷೋತ್ತಮ ಶೆಟ್ಟಿ ವಾಮದಪದವು , ಪ್ರಚಾರ ಸಮಿತಿ ಪ್ರಮುಖ್ ರಂಜಿತ್ ಮೈರ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...