Saturday, April 6, 2024

ರಮಾನಾಥ ರೈ ಪರ ಪ್ರಚಾರ ನಡೆಸಿದ ಕಾಂಗ್ರೆಸ್ ಹಿರಿಯ ಜನಾರ್ದನ ಪೂಜಾರಿ

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಜನತೆ ಹಿಂದೆಯೂ ರಮಾನಾಥ ರೈ ಅವರಿಗೆ ಅವಕಾಶ ನೀಡಿದ್ದು, ಅವರು ನಿಮ್ಮನ್ನು ಮರೆಯದೆ ಸೇವೆಯನ್ನು ಮಾಡಿದ್ದಾರೆ. ಹೀಗಾಗಿ ಅವರ ಶ್ರಮವನ್ನು ವ್ಯರ್ಥವಾಗಲು ಬಿಡದೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದರು.

ಅವರು ಬಂಟ್ವಾಳದ ತಮ್ಮ ಮನೆಯಲ್ಲಿ ಪತ್ರಕರ್ತರ ಜತೆ ಮಾತನಾಡಿದರು. ಕಳೆದ ೫೦ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದು, ಈ ಆರೋಗ್ಯ ಸಮಸ್ಯೆಯಿಂದ ನಿಮ್ಮ ಬಳಿಗೆ ಬರಲು ಅಸಾಧ್ಯವಾಗಿದೆ. ಹೀಗಾಗಿ ಪತ್ರಿಕಾ ಹೇಳಿಕೆಯ ಮೂಲಕ ನಿಮ್ಮನ್ನು ವಿನಂತಿಸುತ್ತಿದ್ದು, ರಮಾನಾಥ ರೈ ಅವರನ್ನು ಗೆಲ್ಲಿಸಿಕೊಡಿ.

ಜತೆಗೆ ಕಾಂಗ್ರೆಸ್ ಪಕ್ಷದ ಹಿಂದಿನ ಸಾಧನೆ, ಗ್ಯಾರಂಟಿ ಭರವಸೆಗಳ ಮೂಲಕ ನುಡಿದಂತೆ ನಡೆಯಲು ಬದ್ಧವಾಗಿದ್ದು, ಪಕ್ಷವು ಸ್ಪಷ್ಟ ಬಹುಮತ ಪಡೆಯಲು ಪ್ರತಿಯೊಬ್ಬರೂ ಕಾಂಗ್ರೆಸನ್ನು ಗೆಲ್ಲಿಸಬೇಕು. ಕಾಂಗ್ರೆಸ್‌ಗೆ ಬೆಂಬಲವಾಗಿ ಉಡುಪಿ ಹಾಗೂ ದ.ಕ.ಜಿಲ್ಲೆಯಲ್ಲಿ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಮ್ಮ ಮತವನ್ನು ಹಾಕುವಂತೆ ಕೈ ಮುಗಿದು ಬೇಡಿಕೊಳ್ಳುತ್ತಿದ್ದೇನೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪುರಸಭಾ ಸದಸ್ಯ ವಾಸು ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...