Saturday, April 6, 2024

ಬಂಟ್ವಾಳ ವಿಧಾನಸಭಾ ಕ್ಷೇತ್ರದ “ಮಹಾ ಸಂಪರ್ಕ ಅಭಿಯಾನ” ಯಶಸ್ವಿ, ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ-ದೇವಪ್ಪ ಪೂಜಾರಿ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಮಹಾಸಂಪರ್ಕದ ದಿನ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ , ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು ಹಮ್ಮಿಕೊಂಡಿದ್ದಾರೆ. ಎರಡನೆಯ ಬಾರಿ ಮನೆ ಸಂಪರ್ಕಿಸುವ ಕಾರ್ಯದಲ್ಲಿ ಪಕ್ಷದ ಅಭ್ಯರ್ಥಿಯಾದ ರಾಜೇಶ್ ನಾಯ್ಕ್ ರವರು ಬಡಗಬೆಳ್ಳೂರು ಪಾಣೆಮಂಗಳೂರು ನರಿಕೊಂಬು ಗ್ರಾಮದ ಬೂತಿನಲ್ಲಿ ಮನೆ ಸಂಪರ್ಕ ಮಾಡಿದ್ದಾರೆ.

ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ ಪದ್ಮನಾಭ ಕೊಟ್ಟಾರಿ ಮತ್ತು ಹರಿಕ್ರಷ್ಣ ಬಂಟ್ವಾಳ್ ಪಕ್ಷದ ಜವಾಬ್ದಾರಿ ಇರುವ ಎಲ್ಲಾ ಪ್ರಮುಖರು ತಮ್ಮ ತಮ್ಮ ಬೂತಿನಲ್ಲಿ ಮನೆ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದು, ರಾಜ್ಯ , ಜಿಲ್ಲೆ , ಮಂಡಲದ , ಶಕ್ತಿ ಕೇಂದ್ರ , ಮಹಾಶಕ್ತಿ ಕೇಂದ್ರ ಹಾಗೂ ಬೂತು ಸಮಿತಿಯ ಎಲ್ಲಾ ಪ್ರಮುಖರು ಒಂದು ಮತಕಟ್ಟೆಯಲ್ಲಿ ಮನೆ ಮತಯಾಚನೆ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...