ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಇದನ್ನು ಸ್ವತಃ ನಳಿನ್ ಕುಮಾರ್ ಅವರೇ ಖಂಡಿಸಿದ್ದಾರೆ.
![](https://nammabantwala.com/wp-content/uploads/2024/03/IMG-20240322-WA0035-jpg.webp)
ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ.
ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ.
ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು.
— Nalinkumar Kateel (@nalinkateel) May 17, 2023
ಟ್ವೀಟ್ ಮಾಡಿರುವ ಅವರು, ‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದ್ದಾರೆ.
![](https://nammabantwala.com/wp-content/uploads/2024/04/WhatsApp-Image-2024-04-05-at-8.46.41-AM-jpeg.webp)