


ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡುವ ಮೂಲಕ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ.
ವಿಧಾನ ಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದರು. ಆದರೆ ಈ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದರು. ಇದೀಗ ಸೋಲಿನ ಬಳಿಕ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟಲು ಮುಂದಾಗಿದ್ದೇವೆ. ಸೋಲೇ ಅಂತಿಮವಲ್ಲ ಎಂದು ಹೇಳಿದ್ದಾರೆ.


