Saturday, April 6, 2024

ರಾಜ್ಯದಲ್ಲಿ ಶಾಂತಿ ಕದಡಿಸುವ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು : ಮೂಲ್ಕಿಯಲ್ಲಿ ಅಬ್ಬರಿಸಿದ ಪ್ರಧಾನಿ ಮೋದಿ

ಮೂಲ್ಕಿ: ಭಾರತದ ಕೀರ್ತಿ ಪತಾಕೆ ಇಡೀ ಜಗತ್ತಿನಾದ್ಯಂತ ಪಸರಿಸಿದೆ. ಇಡೀ ಜಗತ್ತಿನಲ್ಲೇ ಕರ್ನಾಟಕ ಬಗ್ಗೆ ಜೈಕಾರ ಮೊಳಗ ಬೇಕು ಎಂದಾದರೆ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, “ಪರಶುರಾಮ ಕ್ಷೇತ್ರ ದ ಯೆನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಮೋಕೆದ ಸೊಲ್ಮೆಲ್” ಎಂದರು.

ಭಯೋತ್ಪಾದನೆ ಪೋಷಣೆ ಮಾಡೋದು ಕಾಂಗ್ರೆಸ್ಸಿಗರು. ಶಂಕಿತ ಉಗ್ರರನ್ನ ಬಿಡಿಸುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ. ಶಂಕಿತರನ್ನ ಬಂಧಿಸಿದ್ರೆ ಕಾಂಗ್ರೆಸ್​ನವರು ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಶಾಂತಿಯ ಶತ್ರು, ಅಭಿವೃದ್ಧಿಯ ಶತ್ರು ಎಂದು ಕಿಡಿಕಾರಿದರು.

ವಿಧಾನಸಭಾ ಚುನಾವಣೆಯ ಮತದಾನದ ದಿನ ಇನ್ನು ದೂರವಿಲ್ಲ. ದೇಶದಲ್ಲಿ ಕರ್ನಾಟಕ ರಾಜ್ಯವನ್ನು ನಂ.1 ಮಾಡುತ್ತೇವೆ. ಇದು ಡಬಲ್‌ ಎಂಜಿನ್‌ ಸರ್ಕಾರದಿಂದ ಮಾತ್ರ ಸಾಧ್ಯ. ಕರ್ನಾಟಕಕ್ಕೆ ಮೂಲಸೌಕರ್ಯ ಒದಗಿಸುವ ಮೂಲಕ ನಂ.1 ರಾಜ್ಯವನ್ನಾಗಿ ಮಾಡಲಾಗುವುದು. ಹೀಗಾಗಿ ಬಹುಮತದ ಬಿಜೆಪಿ ಸರ್ಕಾರಕ್ಕೆ ಮತನೀಡಿ ಎಂದು ಹೇಳಿದರು.

ಕಾಂಗ್ರೆಸ್ ಶಾಂತಿಯ ವಿರೋಧಿ, ಕಾಂಗ್ರೆಸ್ ಅಭಿವೃದ್ಧಿಯ ಶತ್ರು ಎಂದ ನರೇಂದ್ರ ಮೋದಿ, ಕಾಂಗ್ರೆಸ್ ಆತಂಕವಾದಿಗಳ ರಕ್ಷಣೆಗೆ ನಿಲ್ಲುತ್ತದೆ. ಕೇವಲ ತುಷ್ಟೀಕರಣ ಮಾಡುತ್ತದೆ. ದೇಶದ ಜನರು ಸೈನಿಕರ ಸಾಹಸ ನೋಡಿ ಹೆಮ್ಮೆಪಡುತ್ತಾರೆ. ಆದರೆ, ಕಾಂಗ್ರೆಸ್‌ ನಮ್ಮ ಸೈನಿಕರಿಗೆ ಅವಮಾನ ಮಾಡುತ್ತಿದೆ. ಭಯೋತ್ಪಾದಕರು ಸತ್ತಾಗ ಕಣ್ಣೀರು ಹಾಕುತ್ತದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಪಕ್ಷ ಪ್ರತಿ ಯೋಜನೆಯಲ್ಲಿ 85% ಕಮಿಷನ್ ಪಡೆಯುತ್ತದೆ. ಕರ್ನಾಟಕದ ಅಭಿವೃದ್ಧಿಯನ್ನು ದಶಕಗಳಷ್ಟು ಹಿಂದೆ ತೆಗೆದುಕೊಂಡು ಹೋಗಿದೆ. ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ. ಡೆಲ್ಲಿಯಲ್ಲಿ ಕುಳಿತ ಒಂದು ಕುಟುಂಬ ಕರ್ನಾಟಕವನ್ನು ನಂ.1 ಎಟಿಎಂ ಮಾಡಿಕೊಳ್ಳುವುದಕ್ಕೆ ಚಿಂತನೆ ನಡೆಸಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸ್‌ನವರು ಮತ ಕೇಳುತ್ತಿದ್ದಾರೆ. ಕರ್ನಾಟಕದ ಜನರು ಮತ ಹಾಕುವ ಮುನ್ನ ಯೋಚನೆ ಮಾಡಬೇಕು ಎಂದು ಹೇಳಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...