Sunday, April 7, 2024

ಚುನಾವಣಾ ಪ್ರಚಾರಕ್ಕೆ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಸಾವು

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.
ಪ್ರವೀಣ್ ಚಂದ್ರ ನಾಯಕ್ ಮೃತಪಟ್ಟ ಯುವಕ.
ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತ ನಾಗಿದ್ದ. ಪ್ರಗತಿ ಪರ ಕೃಷಿಕನಾಗಿಯೂ ಗುರುತಿಸಿಕೊಂಡಿದ್ದ ಪ್ರವೀಣ್ ಅವರು ಇಂದು ಚುನಾವಣಾ ಪ್ರಚಾರದ ವೇಳೆ ತಲೆ ಸುತ್ತು ಕಂಡು ನೆಲಕ್ಕೆ ಬಿದ್ದಿದ್ದ ಎನ್ನಲಾಗಿದೆ. ‌ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೂ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ. ‌

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...