Saturday, April 13, 2024

ಅಭಿವೃದ್ಧಿಯನ್ನು ಕರ್ತವ್ಯ ಎಂದು ಮಾಡಿದ್ದೇನೆ-ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್.ಎಸ್ಟಿ ಕಾಲೋನಿ ಹಾಗೂ ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಅಭಿವೃದ್ಧಿಯನ್ನು ಕರ್ತವ್ಯ ಎಂದು ಮಾಡಿದ್ದೇನೆ, ಅದರ ಜೊತೆಗೆ ಕ್ಷೇತ್ರದ ಜನರೊಂದಿಗೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಂತೆ ಸೇವೆ ಮಾಡಿದ್ದೇನೆ, ಇನ್ನು ಮುಂದೆಯೂ ಇದೇ ರೀತಿ ಕ್ಷೇತ್ರದ ಜನರ ಸೇವಕನಾಗಿ ಕೆಲಸ ಮಾಡಲು ಅಧಿಕಾರ ನೀಡಿ ಎಂದು ಮನವಿ ಮಾಡಿದರು.

ಭಾರತವನ್ನು ವಿಶ್ವಗುರು ಮಾಡಲು ಹೊರಟ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕೇಂದ್ರದಲ್ಲಿ ಶಕ್ತಿವಂತರಾಗಿ ಮಾಡಲು ಬಂಟ್ವಾಳ ದಲ್ಲಿ ಬಿಜೆಪಿಯನ್ನು ಗೆಲ್ಲಿಸಿ. ನಾನು ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂಬುದು ಕ್ಷೇತ್ರದ ಮತದಾರರಿಗೆ ತಿಳಿದಿರುವ ವಿಚಾರ,ಆದರೆ ಯಾವುದೇ ರೀತಿಯ ವಿಚಾರಗಳಿಲ್ಲದ ಕಾಂಗ್ರೆಸ್ ಗೆ ನಿರಾಶೆ ಉಂಟಾಗಿದ್ದು,ಅಧಿಕಾರಕ್ಕೆ ಬರಲು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದೆ, ಆದರೆ ಕ್ಷೇತ್ರದ ಮತದಾರರಿಗೆ ನಾನು ಏನು ಎಂಬುದು ತಿಳಿದಿರುವ ವಿಚಾರ ಹಾಗಾಗಿಯೇ ನಿರೀಕ್ಷೆಗೂ ಮೀರಿದ ಪ್ರೀತಿ ವಿಶ್ವಾಸ ನೀಡಿದ್ದೀರಿ ಎಂದು ಹೇಳಿದರು . ಇವರ ಎಲ್ಲಾ ಆರೋಪಗಳಿಗೆ ಮೇ. 10 ರಂದು ಬಿಜೆಪಿಗೆ ಮತ ನೀಡಿ ಗೆಲ್ಲಿಸುವ ಮೂಲಕ ಉತ್ತರ ನೀಡಬೇಕಾಗಿದೆ ಎಂದು ಮನವಿ ಮಾಡಿದರು.

ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾದವ ಮಾವೆ ಮಾತನಾಡಿ, ರಾಜೇಶ್ ನಾಯ್ಕ್ ಅವರು ಬಂಟ್ವಾಳ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮಾತನಾಡಿ ಎಂದು ಕಾಂಗ್ರೆಸ್ ನವರಿಗೆ ಸವಾಲೆಸದರು. ಕಳೆದ 30 ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ರಾಜೇಶ್ ನಾಯ್ಕ್ ಅವರು 5 ವರ್ಷಗಳಲ್ಲಿ ಶಾಸಕತ್ವದ ಪ್ರಥಮ ಅವಧಿಯಲ್ಲಿ ಮಾಡಿದ್ದಾರೆ ಎಂಬುದು ನಮಗೆ ಹೆಗ್ಗಳಿಕೆ ಎಂದರು.
ಕಾಂಗ್ರೇಸ್ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿ ಎಷ್ಷೇ ಕಸರತ್ತು ಮಾಡಿದರೂ ಮೇ13 ರ ಫಲಿತಾಂಶ ಬಿಜೆಪಿಯದ್ದು ಆಗಿರುತ್ತದೆ, ಆದರೆ ಅತ್ಯಧಿಕ ಅಂತರದ ಗೆಲುವು ರಾಜೇಶ್ ನಾಯ್ಕ್ ಅವರಿಗೆ ತಂದುಕೊಡಬೇಕು ಎಂಬುದು ನಮ್ಮ ಗುರಿಯಾಗಬೇಕು ಎಂದು ಅವರು ತಿಳಿಸಿದರು.
ಕಾಂಗ್ರೇಸ್ ಅಧಿಕಾರದ ಅವಧಿಯಲ್ಲಿ ರಮಾನಾಥ ರೈ ಅವರು 5 ಸಾವಿರ ಕೋಟಿ ಅನುದಾನ ತಂದಿರುವುದು ನನಗೆ ಗೊತ್ತಿಲ್ಲ, ಹೇಗಾದರೂ ಮಾಡಿ ಅಧಿಕಾರಕ್ಕೆ ಬರಲು ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ ಎಂದು ಆರೋಪ ಮಾಡಿದ ಅವರು, ರಾಜೇಶ್ ನಾಯ್ಕ್ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾರದೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿ.ಪಂ.ಮಾಜಿ ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್ ಮಾತನಾಡಿ, ಬಾಳ್ತಿಲ ಗ್ರಾಮದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ ರಾಜೇಶ್ ನಾಯ್ಕ್ ಅವರನ್ನು ಮುಂದಿನ ಅವಧಿಯಲ್ಲಿ ವಿರೋಧಿಗಳಿಗೆ ನಡುಕ ಹುಟ್ಟಿಸುವ ರೀತಿಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ತೋರಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಾಳ್ತಿಲ ಗ್ರಾ.ಪಂ. ಅಧ್ಯಕ್ಷೆ ಹಿರಣ್ಮಿಯಿ,ಸದಸ್ಯರಾದ ಶಿವರಾಜ್, ವಿಠಲ ನಾಯ್ಕ್,ಚಂದ್ರಶೇಖರ್ ಚೆಂಡೆ, ಅಶೋಕ್ ಕುಮಾರ್ ನೀರಪಾದೆ,ಚೈತ್ರ ಕಶೆಕೋಡಿ, ಲತೀಶ್ ಕುರ್ಮಾನ್, ಜ್ಯೋತಿ ಕಡ್ಮಡ್ಕ,ಆನಂದ ಶೆಟ್ಟಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಪಿ‌ಎಸ್. ಹಾಗೂ ಪ್ರಮುಖರು ಉಪಸ್ಥಿತರಿದ್ದರು

More from the blog

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...