Sunday, April 21, 2024

ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ತೆರಳಿ ಮತಯಾಚನೆ ನಡೆಸಿದ ರಾಜೇಶ್ ನಾಯ್ಕ್

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು.

ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರಕ್ಕಿಂತಲೂ ಅಧಿಕ ಅನುದಾನದ ಮೂಲಕ ಸರ್ವ ವ್ಯಾಪಿ ಮತ್ತು ಸರ್ವಸ್ಪರ್ಶಿಯಾದ ಅಭಿವೃದ್ಧಿ ಮಾಡಿದ್ದೇನೆ ಎಂಬ ಸಂತೋಷ ಇದೆ, ಅಭಿವೃದ್ಧಿ ಜೊತೆಗೆ ಶಾಂತಿಯುತ ಬಂಟ್ವಾಳವಾಗಿ ನಿರ್ಮಾಣ ಮಾಡಿದ್ದೇನೆ ಎಂದು ತಿಳಿಸಿದರು.

ಅರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರವಾಗಿ ಸುಧಾರಣೆ ತರಲು ನಾನು ಮಾಡಿದ ಪ್ರಯತ್ನಕ್ಕೆ ಬೆಲೆ ಸಿಕ್ಕಿದೆ. ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಕಲ ವ್ಯವಸ್ಥೆ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕ್ಷೇತ್ರದ ಜನರ ಮನೆಬಾಗಿಲಿಗೆ ತೆರಳಿ ಆರೋಗ್ಯ ತಪಾಸಣೆ ಮಾಡುವ ಉದ್ದೇಶದಿಂದ ಸಂಚಾರಿ ಐಸಿಯು ಬಸ್, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ, ಐಸಿಯು ಬೆಡ್ ಹೀಗೆ ಹತ್ತಾರು ಯೋಜನೆಗಳನ್ನು ನೀಡಿದ್ದೇನೆ, ಇದರ ಜೊತೆಗೆ ಪುಂಜಾಲಕಟ್ಟೆ ಆಸ್ಪತ್ರೆಯನ್ನು 13 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸುವ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇನೆ, ಇದರ ಜೊತೆಗೆ ಕ್ಷೇತ್ರದ ಧಾರ್ಮಿಕ ಕೇಂದ್ರಗಳಿಗೆ ಈ ಹಿಂದೆ ಕಂಡರಿಯದ ಪ್ರಮಾಣದಲ್ಲಿ ಅನುದಾನಗಳ ನೀಡಿ, ಸಂಪೂರ್ಣ ಅಭಿವೃದ್ಧಿಗೆ ಕೊಡುಗೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಲೆಯಿದ್ದು,ಕ್ಷೇತ್ರದಲ್ಲಿ ಸಂಚಾರ ಮಾಡಿದಾಗ ಜನರ ತೋರುತ್ತಿರುವ ಪ್ರೀತಿಯೇ ವಿಜಯಕ್ಕೆ ಮೆಟ್ಟಿಲು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೇಸ್ ಹತಾಶೆಯಿಂದ ಭಜರಂಗದಳ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಹಿಂದೂ ಭಾವನೆಯ ಮೇಲೆ ಪ್ರಭಾವ ಬೀರಿದೆ ಎಂದು ಹೇಳಿದ ಅವರು, ರಾಷ್ಟ್ರೀಯತೆಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಪಾಲಕ್ಕಾಡ್ ಜಿಲ್ಲಾಧ್ಯಕ್ಷ ಹರಿದಾಸ್, ರಾಜ್ಯ ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆಭಟ್, ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ,ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಸಮಿತಿ ಪ್ರಮುಖರಾದ ಪ್ರಕಾಶ್ ಅಂಚನ್, ರಮನಾಥ ರಾಯಿ, ಗಣೇಶ್ ರೈ ಮಾಣಿ, ಸುರೇಶ್ ಕುಲಾಲ್, ದಿನೇಶ್ ಭಂಡಾರಿ, ಮಾದವ ಮಾವೆ, ಉದಯಕುಮಾರ್ ರಾವ್, ಗೋವಿಂದ ಪ್ರಭು, ಶ್ರೀಧರ್ ಶೆಟ್ಟಿ ಪುಳಿಂಚ, ಪ್ರಭಾಕರ ಪ್ರಭು, ರಂಜಿತ್ ಮೈರ, ವಿವೇಕ್ ಶೆಟ್ಟಿ ನಗ್ರಿಗುತ್ತು, ಶರ್ಮಿತ್ ಜೈನ್, ಮೋಹನ್ ಪಿ.ಎಸ್, ಯಶೋಧರ ಕರ್ಬೆಟ್ಟು, ರಾಜಾರಾಮ್ ನಾಯಕ್ ನಾಯಕ್ ,ಚಂದ್ರಶೇಖರ್ ಪೂಜಾರಿ ಅಗ್ರಹಾರ್ , ರಮನಾಥ ಪೈ, ಲಕ್ಮೀನಾರಾಯಣ, ನಾರಾಯಣ ಕುಲಾಲ್ ಭಂಡಾರಿಬೆಟ್ಟು,ಭಾರತಿ ಚೌಟ, ಮೀನಾಕ್ಷಿ ಕೆ.ಗೌಡ, ರೇಖಾ ಪೈ, ಶಶಿಕಲಾ , ಗೋಪಾಲ ಸುವರ್ಣ, ಗುರುದತ್ ನಾಯಕ್, ಸುಪ್ರೀತ್ ಆಳ್ವ, ಚರಣ್ ಜುಮಾದಿಗುಡ್ಡೆ, ಪುರುಷೋತ್ತಮ ಶೆಟ್ಟಿ , ಜನಾರ್ದನ ಬೊಂಡಾಲ,ರೋಶನ್ ಡಿ.ಸೋಜ, ಮತ್ತಿತರರು ಉಪಸ್ಥಿತರಿದ್ದರು.

More from the blog

ಸುಬ್ರಹ್ಮಣ್ಯ : ವೇತನಕ್ಕೆ ನೀತಿ ಸಂಹಿತೆ ಅಡ್ಡಿ ಆಯಿತೇ!! ಮೇಲಧಿಕಾರಿಗಳಿಗೆ ನೌಕರರ ನೋವು ಯಾಕೆ ಅರ್ಥ ಆಗುತ್ತಿಲ್ಲ..!

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ರಥ ನಿರ್ಮಾಣ ಮೊದಲಾದ ಪಂಚಪರ್ವದ ಕೆಲಸ ಕಾರ್ಯಗಳನ್ನು ಪಾರಂಪರಿಕವಾಗಿ ನಿರ್ವಹಿಸುತ್ತಿರುವ ಸುಮಾರು 27 ಮಂದಿ ಮಲೆಕುಡಿಯ ಜನಾಂಗದ ನೌಕರರಿಗೆ ಕಳೆದ ಎರಡು ತಿಂಗಳುಗಳಿಂದ ದೇವಸ್ಥಾನದ ಆಡಳಿತ ವೇತನ...

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...