ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಸುಮಾರು 8282 ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ವಿರುದ್ಧ ಗೆಲುವು ಸಾಧಿಸಿದ್ದಾರೆ. ರಾಜೇಶ್ ನಾಯ್ಕ್ ಅವರು ಕಳೆದ ಬಾರಿ 15,700 ಅಂತರದಿಂದ ಗೆಲುವು ಸಾದಿಸಿದ್ದು, ಆದ್ರೆ ಈ ಬಾರಿ ಕಡಿಮೆ ಅಂತದಿಂದ ಗೆಲುವು ಸಾಧಿಸಿದ್ದಾರೆ.
ಇನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ರವರ ಗೆಲುವಿಗೆ ಅವಿರತವಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪ್ರಮುಖರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸಿದ್ದಾರೆ.