ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳು ಇಂದು ಪ್ರಮಾಣವಚನ ಸ್ವೀಕರಿಸಿದರು. ಇನ್ನು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಅವರು ಇಂದು ಬೆಂಗಳೂರಿನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನ ಸ್ವೀಕರಿಸಿದರು. ಸಧ್ಯ ಶಾಸಕ ರಾಜೇಶ್ ನಾಯ್ಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.