Saturday, April 6, 2024

ಎಚ್ಚರ….! ಬೆಂಗಳೂರಲ್ಲಿ 3 ದಿನ 144 ಸೆಕ್ಷನ್ ಜಾರಿ

2023ರ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು ಬಹಿರಂಗ ಪ್ರಚಾರಕ್ಕೆ ಬ್ರೇಕ್ ಹಾಕಲಾಗಿದೆ. ಮೇ 13ಕ್ಕೆ ಅಂತಿಮ ರಿಸಲ್ಟ್ ಘೋಷಣೆಯಾಗಲಿದೆ.

ರಾಜ್ಯದಲ್ಲಿ ಸುಮಾರು 5.2 ಕೋಟಿ ಅರ್ಹ ಮತದಾರರ ಪೈಕಿ 9.17 ಲಕ್ಷ ಮಂದಿ ಇದೇ ಮೊದಲ ಬಾರಿಗೆ ವೋಟ್ ಹಾಕುತ್ತಿದ್ದಾರೆ. ರಾಜ್ಯದ 58,282 ಮತಗಟ್ಟೆಗಳಲ್ಲಿ ನಾಳೆ ಮತದಾನ ನಡೆಯಲಿದೆ. ಬಿಜೆಪಿ 224, ಕಾಂಗ್ರೆಸ್ 223 ಮತ್ತು ಜೆಡಿಎಸ್ 207 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಮತದಾನ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವಹಿಸಲಾಗಿದೆ.

ಬೆಂಗಳೂರಿನಲ್ಲಿ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಸುರಕ್ಷತೆ ಕಾಪಾಡುವ ದೃಷ್ಠಿಯಿಂದ ಬೆಂಗಳೂರಿನಲ್ಲಿ 3 ದಿನಗಳ ಕಾಲ 144 ಸೆಕ್ಷನ್ ಜಾರಿಗೊಳಿಸಲಾಗಿದೆ

ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರು ಆದೇಶ ಹೊರಡಿಸಿದ್ದು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 08 ಸಂಜೆ 6 ರಿಂದ ಮೇ 11ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

144 ಸೆಕ್ಷನ್ ಪ್ರಕಾರ ನಿರ್ಬಂಧಗಳೇನು…?

  • 5 ಜನರಿಗಿಂತ ಹೆಚ್ಚಿನವರು ಗುಂಪು ಸೇರಬಾರದು
  • ವೋಟ್ ಮಾಡುವಾಗ ಕೇಂದ್ರದಲ್ಲಿ ಮತದಾರರು ಹೊರತುಪಡಿಸಿ ಉಳಿದವರು ಇರಬಾರದು
  • ಯಾವುದೇ ಧಾರ್ಮಿಕ ಪಂಗಡಗಳು, ರಾಜಕೀಯ ಮೆರವಣಿಗೆಗೆ ನಿರ್ಬಂಧ
  • ಮತದಾನ ಹಿನ್ನೆಲೆಯಲ್ಲಿ ಮಾರಾಕಾಸ್ತ್ರಗಳನ್ನು ತೆಗೆದುಕೊಂಡು ಬರುವಂತಿಲ್ಲ
  • ವಿನಾಶಕಾರಿ ಹಾಗೂ ಸ್ಫೋಟಕ ವಸ್ತುಗಳಿಗೆ ಸಂಪೂರ್ಣ ನಿರ್ಬಂಧ
  • ನಿಷೇಧಿತ ವಸ್ತುಗಳನ್ನು ವ್ಯಕ್ತಿಗಳು ಹೊಂದಿದ್ದರೇ ಪೊಲೀಸರು ವಶಕ್ಕೆ ಪಡೆಯುತ್ತಾರೆ
  • ಪ್ಲೆಕ್ಸ್‌ಗಳನ್ನು ಹಾಕುವುದನ್ನು ನಿಷೇಧ ಮಾಡಲಾಗಿದೆ

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...