Thursday, April 18, 2024

ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಪತ್ತೆ

ಕುಂದಾಪುರ: ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಪತ್ತೆಯಾಗಿದೆ.

ಸುಳ್ಯದ ನಿವಾಸಿ ಸುಹಾಸ್ ಎಂ ಮೃತ ಯುವಕ.

ಮೇ 5 ರಂದು ಸೌಡ ಸಮೀಪದ ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ಸುದ್ಧಿ ತಲುಪಿಸಿ ಹುಡುಕಾಟ ಆರಂಭಿಸಿದ್ದಾರೆ.

ಇನ್ನು ಶನಿವಾರ ಬೆಳಗ್ಗೆ ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಾದ ಐವರ್ನಾಡಿನ ಮಡ್ತಿಲದಿಂದ ಮೂಡಬಿದ್ರೆಗೆ ಬಂದಿದ್ದ. ಅಲ್ಲಿಂದ ಸ್ನೇಹಿತರೊಂದಿಗೆ ಸೌಡ ಹೊಳೆಗೆ ಆಟವಾಡಲು ಬಂದಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...