Thursday, April 18, 2024

ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ : ಕಳ್ಳನ ಚಹರೆ ಸಿ.ಸಿ ಟಿವಿಯಲ್ಲಿ ಸೆರೆ

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್‌ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ವೇಳೆ ನುಗ್ಗಿ ಹಲವಾರು ವಸ್ತುಗಳನ್ನು ಕಳ್ಳತನಗೈದ ಘಟನೆ ನಡೆದಿದೆ.

ಉಪ್ಪಿನಂಗಡಿ ಹಳೆ ಬಸ್‌ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫ‌ಲವಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾನೆ. ಸನಿಹದ ಮೆಡಿಕಲ್‌ ಶಾಪಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ, ಅಂಗಡಿ ಯೊಳಗಿದ್ದ ಮೊಬೈಲ್‌ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಅದೇ ಕಟ್ಟಡದ ಜವುಳಿ ಅಂಗಡಿಗೂ ಮಾಡಿನ ಹೆಂಚು ತೆಗೆದು ನುಗ್ಗಿದ ಸ್ನಾನಕ್ಕೆ ಬಳಸುವ 2 ಟೆವೆಲ್‌ ಕದ್ದೊಯ್ದಿದ್ದಾನೆ.

ಇದೇ ರಸ್ತೆಯ ಕೆನರಾ ಬ್ಯಾಂಕ್‌ ಸನಿಹದ ಹೊಟೇಲ್‌, ಫ‌ರ್ನಿಚರ್‌ ಅಂಗಡಿ, ಜನರಲ್‌ ಸ್ಟೋರ್, ದಿನಸಿ ಅಂಗಡಿ ಕಟ್ಟಡಗಳಿಗೂ ಒಳ ನುಗ್ಗಿದ ಕಳ್ಳ ಅಲ್ಲಿಂದಲೂ ಕೈಗೆ ದೊರೆತ ವಸ್ತುಗಳನ್ನೆಲ್ಲ ಎಗರಿಸಿದ್ದಾನೆ. ಫ‌ನಿರ್ಚರ್‌ ಅಂಗಡಿಯೊಳಗಿದ್ದ ಬೆಲೆ ಬಾಳುವ ವಾಚೊಂದನ್ನು ಕದ್ದೊಯ್ದಿದ್ದು, ಎಲ್ಲೆಡೆ ಅಂಗಡಿಯ ಮಾಡಿನಿಂದಲೇ ಕಳ್ಳ ಒಳಪ್ರವೆಶಿಸಿದ ನಡೆ ವ್ಯಕ್ತವಾಗಿದೆ. ಈ 7 ಪ್ರಕರಣಗಳಿಗೂ ಸಾಮ್ಯತೆ ಇದ್ದು, ಓರ್ವನೇ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಂದು ಅಂಗಡಿಯೊಳಕ್ಕೆ ನುಗ್ಗಿದಾಕ್ಷಣದಲ್ಲೇ ಕಳ್ಳ ಸಿಸಿ ಕೆಮರಾದ ದಿಕ್ಕು ಬದಲಾಯಿಸುವ ಪ್ರಯತ್ನ ಮಾಡಿದ್ದು, ಆ ವೇಳೆ ಆತನ ಮುಖ ಕೆಮರಾದಲ್ಲಿ ಸೆರೆಯಾಗಿದೆ. ಸಿಸಿ ಕೆಮರಾದಲ್ಲಿ ಕಳ್ಳನ ಭಾವ ಚಿತ್ರ ಸ್ಪಷ್ಟವಾಗಿ ಸೆರೆಯಾಗಿದೆ.

ಉಪ್ಪಿನಂಗಡಿ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...