ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಘಟನೆ ವಿಟ್ಲ ಸಮೀಪದ ಪುಣಚ ದೇವಿನಗರದ ಬಳಿ ನಡೆದಿದೆ.
ಘಟನೆಯಲ್ಲಿ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಸಹಿತ ಪಿಕಪ್ ವಾಹನವನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ವಾಹನದಲ್ಲಿ ಎರಡು ಜಾನುವಾರುಗಳಿದ್ದು, ಅವುಗಳನ್ನು ಕೇರಳ ರಾಜ್ಯದ ಭಾಗಗಳಿಗೆ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರ ವಶಕ್ಕೆ ನೀಡಿದ್ದರು. ಪೊಲೀಸರು ವಿಚಾರಣೆ ನಡೆಸಿದಾಗ ಸಮರ್ಪಕ ದಾಖಲೆ ನೀಡಿದ ಹಿನ್ನೆಲೆಯಲ್ಲಿ ವಾಹನವನ್ನು ಮಾತ್ರ ವಶಕ್ಕೆ ಪಡೆದುಕೊಂಡು ದನಗಳನ್ನು ಕಳುಹಿಸಿಕೊಟ್ಟಿದ್ದಾರೆ.