Tuesday, April 16, 2024

ಇಂದು ಬಂಟ್ವಾಳಕ್ಕೆ ಯೋಗಿ ಆದಿತ್ಯನಾಥ್ : ಬಿಗಿ ಪೊಲೀಸ್‌ ಬಂದೋಬಸ್ತ್

ಬಂಟ್ವಾಳ: ಹಿಂದೂ ಸಾಮ್ರಾಟ್ ಯು.ಪಿ. ಮುಖ್ಯಮಂತ್ರಿ ಚುನಾವಣಾ ಸ್ಟಾರ್ ಪ್ರಚಾರಕಲ್ಲಿ ಓರ್ವರಾದ ಯೋಗಿ ಆದಿತ್ಯನಾಥ್ ಅವರು ಇಂದು ಬಂಟ್ವಾಳದಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರವಾಗಿ ಮತಯಾಚನೆ ನಡೆಸಲಿದ್ದಾರೆ‌.

ಸಂಜೆ 5 ಗಂಟೆಯಿಂದ 6 ಗಂಟೆ ವರೆಗೆ ಸುಮಾರು 1 ಗಂಟೆಗಳ ಕಾಲ ರೋಡ್ ಶೋ ನಲ್ಲಿ ಭಾಗವಹಿಸಿ ಮಂಗಳೂರು ಮೂಲಕ ವಾಪಾಸು ಹೋಗಲಿದ್ದಾರೆ. ಬೆಳಿಗ್ಗೆ ಶಿವಮೊಗ್ಗ ಹೆಲಿಕ್ಯಾಪ್ಟರ್ ನ ಮೂಲಕ ಬರುವ ಯೋಗಿ ಅವರು ಶಿವಮೊಗ್ಗದಿಂದ ಕೊಪ್ಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅ ಬಳಿಕ ಕೊಪ್ಪದಿಂದ ನೇರವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಬರಲಿದ್ದಾರೆ. ಅಲ್ಲಿ ರೋಡ್ ಶೋ ಮೂಲಕ ಪ್ರಚಾರದಲ್ಲಿ ಭಾಗವಹಿಸಿದ ಬಳಿಕ ಅಲ್ಲಿಂದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ರೋ ಶೋ ನಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಹೊನ್ನಾವರಕ್ಕೆ ತೆರಳಿ ಹೊನ್ನಾವರದಲ್ಲಿ ಕಾರ್ಯಕ್ರಮ ಮುಗಿಸಿ 4.40 ರ ಸಮಯದಲ್ಲಿ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಖಾಸಗಿ ಗ್ರೌಂಡ್ ನಲ್ಲಿ ಹೆಲಿಪ್ಯಾಡ್ ಲ್ಯಾಂಡ್ ಅಗಲಿದೆ. ಅಬಳಿಕ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರವಾದ ರೋಡ್ ಶೋ ಪ್ರಚಾರದಲ್ಲಿ ಭಾಗವಹಿಸಲಿರುವರು. ಕೈಕಂಬ ಪೊಳಲಿ ದ್ವಾರದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ಕಾರ್ಯಕರ್ತರ ಜೊತೆಗೆ ರೋಡ್ ಶೋ ನಲ್ಲಿ ಯೋಗಿ ಆದಿತ್ಯನಾಥ್ ಅವರು ಬಾಗವಹಿಸಲಿದ್ದಾರೆ.

ಬಿಗಿ ಬಂದೋಬಸ್ತ್
‌ಯು.ಪಿ.ಸಿ.ಎಮ್ ಯೋಗಿ ಆದಿತ್ಯನಾಥ್ ಬಂಟ್ವಾಳದ ರೋಡ್ ಶೋ‌ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ ಮಿಲಿಟರಿ ಪಡೆ ಸಹಿತ ವಿವಿಧ ಪೋಲೀಸ್ ತುಕಡಿಗಳು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.

ಡಿ.ಐ.ಜಿ.ಎಸ್.ಪಿ.ಸಹಿತ ಉನ್ನತ ಮಟ್ಟದ ಅ಼ಧಿಕಾರಿಗಳು ಬಿಸಿರೋಡಿನ ಯೋಗಿ ಲ್ಯಾಂಡ್ ಅಗುವ ಜಾಗವನ್ನು ಪರಿಶೀಲನೆ ನಡೆಸಿದ್ದಾರೆ‌. ಸಾವಿರಕ್ಕೂ ಅಧಿಕ ಪೋಲೀಸರನ್ನು ನಿಯೋಜನೆ ಮಾಡಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ 30 ಕ್ಕೂ ಅಧಿಕ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲಾಗಿದೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...