Friday, April 5, 2024

ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತ

ಬೆಂಗಳೂರು: ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.

ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ.1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

ಎರಡು ತಿಂಗಳ ಹಿಂದೆ ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿತ್ತು. ನಂತರ ದಿನಗಳಲ್ಲಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದ ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಇದರಿಂದ ಅದು 16 ಲಕ್ಷ ಲೀಟರ್​ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹೀಗಾಗಿ ಜಿಲ್ಲಾ ಹಾಲು ಒಕ್ಕೂಟ ಲೀಟರ್​​ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...