ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲುಕುವತಿಯಿಂದ ಜರಗಲಿರುವ ಮಕ್ಕಳ 17ನೇ ಸಾಹಿತ್ಯ ಸಮ್ಮೇಳನವನ್ನು ಕಡೇಶ್ವಾಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಂದಿನ ದಶಂಬರ್ ತಿಂಗಳಿನಲ್ಲಿ ಜರಗಿಸಲಾಗುವುದು ಎಂದು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಹರಿಶ್ಚಂದ್ರ ತಿಳಿಸಿದರು.
ಕಡೇಶ್ವಾಲ್ಯ ಶಾಲೆಯಲ್ಲಿ ಸಮ್ಮೇಳನ ಜರಗಿಸುವ ನಿರ್ಣಯ ಸಭೆಯ ನಂತರ ಅವರು ಈ ಮಾಹಿತಿ ನೀಡಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಮಮತಾ ಭಾಗವಹಿಸಿದರು. ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ಸೆಪ್ಟೆಂಬರ್ ತಿಂಗಳಿನಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗುವುದು, ಸಿದ್ಧತೆಗಳ ಬಗ್ಗೆ ಪೂರ್ವಭಾವಿ ಸಭೆ ಜರಗಿಸಲಾಗುವುದು, ಬಂಟ್ವಾಳ ತಾಲೂಕಿನ ವಿವಿಧ ಪ್ರಾಥಮಿಕ ಪ್ರೌಢ ಮತ್ತು ಪದವಿ ಪೂರ್ವ ಕಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಲಿರುವರು ಎಂದರು.
ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ನೀಡಲಾಗುವುದು ಮತ್ತು
ಸಾರ್ವಜನಿಕರ ಸಂಪೂರ್ಣ ಬೆಂಬಲವನ್ನು ಅಪೇಕ್ಷಿಸುತ್ತೇವೆ ಎಂದು ಬಾಯಾರು ತಿಳಿಸಿದರು.
ಉಪಾಧ್ಯಕ್ಷ ಶಿವರಾಮ ಭಟ್ ನೆಡ್ಲೆ ಮತ್ತು ಶಾಲಾ ಶಿಕ್ಷಕರು ನಿರ್ಣಯ ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಬಾಬು ಪೂಜಾರಿ ಸ್ವಾಗತಿಸಿ ವಂದಿಸಿದರು.