Monday, April 8, 2024

ಖಾಸಗಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ

ಉಳ್ಳಾಲ: ಪಾದಚಾರಿ ಮಹಿಳೆಯೊಬ್ಬರು ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.

ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಖಾಸಗಿ ಬಸ್ ಬಂದಿದೆ. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.

ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ.

ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...