Wednesday, April 17, 2024

ವಿಟ್ಲ ಪಡ್ನೂರು: ಪರಿಸರ ಜಾಗೃತಿ ಶಿಬಿರ

ವಿಟ್ಲ: ವಿಟ್ಲ ಪಡ್ನೂರು ಕಡಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ವಿಟ್ಲ ಒಕ್ಕೂಟದ ವತಿಯಿಂದ ಪರಿಸರ ಜಾಗೃತಿ ಶಿಬಿರ ನಡೆಯಿತು.

ಶಿಬಿರವನ್ನು ವಿಟ್ಲ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು
ಸಭಾ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ನಂತರ ಪರಿಸರ ಜಾಗೃತಿ ಶಿಬಿರದಲ್ಲಿ ಸಂಘದ ಸದಸ್ಯರಿಗೆ ಹಾಗೂ ಮಕ್ಕಳಿಗೆ ಗಿಡ ನಾಟಿ ಮಾಡುವ ಮೂಲಕ ಜಾಗೃತಿ ಮೂಡಿಸಿದರು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಿ.ಎಂ ಹಸೈನಾರ್ ಮಾತನಾಡಿ, ವಿದ್ಯಾರ್ಥಿಗಳ ಮೂಲಕ ಪರಿಸರ ಜಾಗೃತಿ ಮೂಡಿಸಿದಾಗ ಮುಂದಿನ ಪೀಳಿಗೆಗೆ ಉಪಯುಕ್ತ , ಶುದ್ಧವಾದ ಗಾಳಿಯ ಮೂಲಕ ಉಸಿರಾಟ ಮಾಡಲು ಮರಗಿಡಗಳು ಹೆಚ್ಚು ಇದ್ದಾಗ ಮಾತ್ರ ಜನತೆಯ ಆರೋಗ್ಯ ಎಂದು ತಿಳಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕರ ಚಿದಾನಂದ ಪರಿಸರ ಸಂರಕ್ಷಣೆ ಮತ್ತು ರಕ್ಷಣೆ ನಮ್ಮ ಪ್ರಮುಖ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಂತರ ಮಕ್ಕಳಿಗೆ ಪರಿಸರದ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ವಲಯ ಅಧ್ಯಕ್ಷರಾದ ಪ್ರಮೀಳ, ಸರಿತಾ, ಒಕ್ಕೂಟದ ಅಧ್ಯಕ್ಷ ಹರೀಶ್ ಕುಲಾಲ್ ಉಪಸ್ಥಿತರಿದ್ದರು.

ವಿಟ್ಲಪಡ್ನೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಗಳು, ಶೌರ್ಯ ತಂಡದ ಸದಸ್ಯರು ಸಂಘದ ಸದಸ್ಯರು ಶಿಕ್ಷಕ ವೃಂದ ಹಾಗೂ ಮಕ್ಕಳು ಭಾಗವಹಿಸಿದರು. ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರ ಪ್ರಸ್ತಾವಿಸಿದರು.ಸೇವಾ ಪ್ರತಿನಿಧಿ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರ ವಂದಿಸಿದರು

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...