ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಇಳಿಕೆಯ ಹಾದಿಗೆ ಬಂದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಆಗಿದೆ. ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ಇಲ್ಲಿದೆ
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,250 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 56,650, ರೂ. 55,200, ರೂ. 55,200 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 53,350 ರೂ. ಆಗಿದೆ.
ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರ ನೋಡುವುದಾದರೆ ಒಂದು ಗ್ರಾಂ (1GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,520 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,022 ಆಗಿದೆ. ಇತ್ತ ಎಂಟು ಗ್ರಾಂ (8GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 44,160 ಅಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 48,176 ಆಗಿದೆ.
ಇನ್ನು ಹತ್ತು ಗ್ರಾಂ (10GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 55,200 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,220 ಅಗಿದೆ. ಅಲ್ಲದೇ ನೂರು ಗ್ರಾಂ (100GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,52,000 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,02,200 ಆಗಿದೆ.
ಬೆಳ್ಳಿ ಬೆಲೆ
ಇಂದು ಒಂದು ಕೆಜಿ ಬೆಳ್ಳಿ ಬೆಲೆ ರೂ.73,400 ಆಗಿದ್ದು, ನಿನ್ನೆಗೆ ಹೋಲಿಸಿದರೆ ನೂರು ರೂಪಾಯಿ ಕಡಿಮೆ ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಬೆಳ್ಳಿ ಬೆಲೆಯು ನಿನ್ನೆಗಿಂತ ಅಗ್ಗವಾಗಿದೆ. ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 734, ರೂ. 7,340 ಹಾಗೂ ರೂ. 73,400 ಗಳಾಗಿವೆ.