Monday, April 15, 2024

ಮಂಗಳೂರಿಗರಿಗೆ ಸುವರ್ಣಾವಕಾಶ : ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹದಲ್ಲಿ ಉದ್ಯೋಗಾವಕಾಶ, ಜೂ.22, 23ರಂದು ಸಂದರ್ಶನ

ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದ್ದು, ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಚೇರ್‌ಮ್ಯಾನ್ ವಿಲ್ಸನ್ ಫೆರ್ನಾಂಡಿಸ್ ಅವರು, ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿದ್ದು, ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ ಪಿಯುಸಿಯಾಗಿದ್ದು (ಪ್ರಿ-ಯೂನಿವರ್ಸಿಟಿ ಕೋರ್ಸ್), ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್‌ನಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ ಎ೦ದರು.

ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ಧಿರಾಮ್‌ಗಳಿಂದ 1400 ಧಿರಾಮ್ ತನಕ ಮತ್ತು 200 ಧಿರಾಮ್ ಆಹಾರ ಭತ್ಯೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ. ಸುಮಾರು 400 ಉದ್ಯೋಗ ಅವಕಾಶಗಳಿದ್ದು, 2023 ರ ಜೂನ್ 22 ಮತ್ತು 23 ರಂದು ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ ಕಚೇರಿಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಸಂದರ್ಶನವನ್ನು ನಡೆಸಲಾಗುವುದು ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಡೈರೆಕ್ಟರ್ ಲೀನಾ ಫೆರ್ನಾಂಡಿಸ್ ,ಡೈರೆಕ್ಟರ್ ಅಪರೇಶನ್ಸ್‌ ಥೋಮಸ್ ಆಳ್ವ ಉಪಸ್ಥಿತರಿದ್ದರು.

ಸಂದರ್ಶನ ಆಫೀಸಿನ ವಿಳಾಸ:

ಫೆರ್ನಾಂಡಿಸ್ ಗ್ರೂಪ್, ಮೆಟ್ರೋ ಪ್ಲಾಜಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟಿನ ಎದುರುಗಡೆ, ವಾಲೆನ್ಸಿಯಾ, ಮಂಗಳೂರು 575 002.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: +91 9686675463 / 9819044376 ಅಥವಾ http://www.fernandesgroup.com ಗೆ ಭೇಟಿ ನೀಡಬಹುದಾಗಿದೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...