Tuesday, October 31, 2023

ವಿಧಾನಪರಿಷತ್ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

Must read

ಬೆಂಗಳೂರು: ವಿಧಾನಪರಿಷತ್​​ನ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಜೂನ್ 30ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಾಮಪತ್ರ ಸಲ್ಲಿಕೆಗೆ ಜೂನ್ 20 ಕೊನೆಯ ದಿನವಾಗಿದೆ. ವಿಧಾನಸಭೆಯಿಂದ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆ ಇದಾಗಿದ್ದು, ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ರಾಜೀನಾಮೆಯಿಂದ 3 ಸ್ಥಾನಗಳು ತೆರವಾಗಿದ್ದವು.

ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಜೂನ್‌ 13 ರಂದು ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜೂನ್‌ 20 ಕೊನೆಯ ದಿನವಾಗಿದೆ. ಜೂನ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್‌ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.

More articles

Latest article