Sunday, April 14, 2024

20 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟ ಕೌಕ್ರಾಡಿ ಪಿಡಿಒ ಲೋಕಾಯುಕ್ತ ಬಲೆಗೆ

ಮಂಗಳೂರು: ಖಾತೆ ಬದಲಾವಾಣೆಗಾಗಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ಲಂಚ ಪಡೆದ ಆರೋಪದ ಮೇಲೆ ಕೌಕ್ರಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಮಹೇಶ್‌ ಜಿ.ಎನ್. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಜಮೀನಿನ ಖಾತೆಯನ್ನು ತಮ್ಮ ಹೆಸರಿಗೆ ಬದಲಾಯಿಸಲು 2017ರಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆ ಆಗದೇ ಇದ್ದುದರಿಂದ 2021ನೇ ಇಸವಿಯಲ್ಲಿ ಮತ್ತೆ ಅರ್ಜಿ‌ ಸಲ್ಲಿಸಿದ್ದರು. ಶುಲ್ಕವನ್ನು ಸಂದಾಯ ಮಾಡಿದರೂ ಸಹ ಅವರ ಹೆಸರಿಗೆ ಖಾತೆ ಬದಲಾವಣೆ ಆಗಿರಲಿಲ್ಲ. ಹಾಗಾಗಿ ಅವರು 2023ರ ಜೂನ್ 20 ರಂದು ಕೌಕ್ರಾಡಿ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಈ ಬಗ್ಗೆ ವಿಚಾರಿಸಿದ್ದರು. ಈ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್‌.ಜಿ.ಎನ್ ಅವರು ಈ ಕೆಲಸ ಮಾಡಿಕೊಡಲು 20,000 ರೂ.ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರ ವ್ಯಕ್ತಿ ನಮಗೆ ದೂರು ನೀಡಿದ್ದರು’ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ಪಿಡಿಒ ಅವರು ಬುಧವಾರ ಅರ್ಜಿದಾರದಿಂದ 20,000 ರೂ. ಲಂಚದ ಹಣವನ್ನು ಪಡೆದಿದ್ದು, ತಕ್ಷಣವೇ ಅವರನ್ನು ಸ್ಥಳದಲ್ಲಿಯೇ ದಸ್ತಗಿರಿ ಮಾಡಿದ್ದೇವೆ. ಅವರು ಅರ್ಜಿ ದಾರರಿಂದ ಪಡೆದ ಲಂಚದ ಹಣವನ್ನು ವಶಪಡಿಸಿಕೊಂಡಿದ್ದೇವೆ. ಆರೋಪಿಯನ್ನು ಶೀಘ್ರವೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದೇವೆ ಎಂದು ದಕ್ಷಿಣ ಕನ್ನಡ‌ ಜಿಲ್ಲಾ ಲೋಕಾಯುಕ್ತ, ಪೊಲೀಸ್ ವರಿಷ್ಠಾಧಿಕಾರಿ ಸಿ.ಎ.ಸೈಮನ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪಿಎಸ್ಐಗಳಾದ ಕಲಾವತಿ.ಕೆ, ಚಲುವರಾಜು.ಬಿ, ಇನ್ ಸ್ಪೆಕ್ಟರ್ ಗಳಾದ ಅಮಾನುಲ್ಲಾ.ವಿ, ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡ ಪಾಲ್ಗೊಂಡಿದ್ದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...