Sunday, April 14, 2024

ಸೋಮೇಶ್ವರ ಬೀಚ್ ನೈತಿಕ ಪೊಲೀಸರಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ.

ಖಾಸಗಿ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಇದರಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ಸು ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

More from the blog

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...