Monday, April 15, 2024

ಯಕ್ಷಗಾನ ಗುರು, ಭಾಗವತ ತೋನ್ಸೆ ಜಯಂತ ಕುಮಾರ್ ನಿಧನ

ಉಡುಪಿ: ಯಕ್ಷ ಶಿಕ್ಷಣದ ಗುರು, ಭಾಗವತ, ವೇಷಧಾರಿ ತೋನ್ಸೆ ಜಯಂತ್‌ ಕುಮಾರ್‌ ಅವರು ಇಂದು ಸ್ವರ್ಗಸ್ಥರಾಗಿದ್ದಾರೆ.

1946ರಲ್ಲಿ ತೋನ್ಸೆಯವರು ಚೇತನ ಪ್ರೌಢಶಾಲೆ, ಹಂಗಾರಕಟ್ಟೆಯಲ್ಲಿ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದರು. ಆದರೆ ಯಕ್ಷಗಾನದಲ್ಲಿ ಸದಾ ಪ್ರವೃತ್ತರು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು. ಆರಂಭದಲ್ಲಿ ಯಕ್ಷಗಾನ ವೇಷಧಾರಿಯಾಗಿ ಆಮೇಲೆ ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಉಡುಪಿ ಶಾಸಕರ ನೇತೃತ್ವದ ಯಕ್ಷಶಿಕ್ಷಣ ಟಸ್ಟ್ ನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾಗಿದ್ದರು.

ಅವರು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗೆ ಭಾಜನರಾಗಿದ್ದರು.

ಮೃತರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ

ನಾಳೆ ಸಂತೆಕಟ್ಟೆ ಗೋಪಾಲಪುರದಲ್ಲಿರುವ ಮನೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ಸಕಲ ಗೌರವಾರ್ಪಣೆಯೊಂದಿಗೆ ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರವು ನೆರವೇರಲಿದೆ

More from the blog

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...